HomeLatest NewsSHOCKING : ಆಶಾ ಕಾರ್ಯಕರ್ತೆ ನಿರ್ಲಕ್ಷ್ಯಕ್ಕೆ ಶಿಶು ಬಲಿ ! ಮಗುವಿನ ತಲೆ ಗರ್ಭದಲ್ಲೇ.. ದೇಹ...

SHOCKING : ಆಶಾ ಕಾರ್ಯಕರ್ತೆ ನಿರ್ಲಕ್ಷ್ಯಕ್ಕೆ ಶಿಶು ಬಲಿ ! ಮಗುವಿನ ತಲೆ ಗರ್ಭದಲ್ಲೇ.. ದೇಹ ಮಾತ್ರ ಬೇರ್ಪಟ್ಟು ಹೊರಕ್ಕೆ!

ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ವೈದ್ಯಕೀಯ ಲೋಕವೇ ಬೆಚ್ಚಿಬೀಳುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿ ಅವರಿಗೆ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅಲ್ಲಿದ್ದ ಆಶಾ ಕಾರ್ಯಕರ್ತೆ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ವೈದ್ಯರಿಗಾಗಿ ಕಾಯದೆ ತಾವೇ ಬಲವಂತವಾಗಿ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಮಗುವನ್ನು ಅತಿಯಾಗಿ ಎಳೆದ ಪರಿಣಾಮ, ಮಗುವಿನ ತಲೆ ಗರ್ಭದಲ್ಲೇ ಕತ್ತರಿಸಿ ಬಾಕಿಯಾಗಿದ್ದು, ದೇಹ ಮಾತ್ರ ಬೇರ್ಪಟ್ಟು ಹೊರಬಂದಿದೆ. ಈ ಘೋರ ನಿರ್ಲಕ್ಷ್ಯದ ನಂತರ ಸತ್ಯ ಮರೆಮಾಚಲು ಯತ್ನಿಸಿದ ಸಿಬ್ಬಂದಿ, ತಾಯಿಯ ಪ್ರಾಣಾಪಾಯಕ್ಕೆ ಕಾರಣವಾಗಿದ್ದಾರೆ. ಪ್ರಸ್ತುತ ತಾಯಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು.   ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯ ಅತಿಯಾದ ಆತ್ಮವಿಶ್ವಾಸ ಹಾಗೂ ನಿರ್ಲಕ್ಷ್ಯದಿಂದಾಗಿ ಏಳು ತಿಂಗಳ ಹಸುಗೂಸು ಪ್ರಾಣ ಕಳೆದುಕೊಂಡಿದೆ. ಹೆರಿಗೆ ಮಾಡಿಸುವ ಧಾವಂತದಲ್ಲಿ ಮಗುವಿನ ತಲೆ ದೇಹದಿಂದ ಬೇರ್ಪಟ್ಟು, ತಲೆ ತಾಯಿಯ ಗರ್ಭದಲ್ಲೇ ಉಳಿದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಾಯಿತು ?

ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಾಗ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು.ಆಸ್ಪತ್ರೆ ತಲುಪಲು ಇನ್ನು ಕೆಲವೇ ನಿಮಿಷಗಳಿರುವಾಗ ನೋವು ತೀವ್ರಗೊಂಡಿದೆ. ಈ ವೇಳೆ ಆಂಬ್ಯುಲೆನ್ಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ ವೈದ್ಯರಿಗಾಗಿ ಕಾಯುವ ಬದಲು ತಾನೇ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಮಹಿಳೆಗೆ ಇಂಜೆಕ್ಷನ್ ನೀಡಿ ಬಲವಂತವಾಗಿ ಸಾಮಾನ್ಯ ಹೆರಿಗೆ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಗುವನ್ನು ಬಲವಾಗಿ ಎಳೆದ ಪರಿಣಾಮ, ಮಗುವಿನ ದೇಹ ಹೊರಬಂದಿದೆ ಆದರೆ ತಲೆ ಗರ್ಭದ ಒಳಗೇ ಕತ್ತರಿಸಿ ಸಿಲುಕಿಕೊಂಡಿದೆ.

ಸತ್ಯ ಮರೆಮಾಚುವ ಯತ್ನ: ತಮ್ಮ ತಪ್ಪಿನಿಂದ ಮಗು ಸಾವನ್ನಪ್ಪಿದ್ದನ್ನು ಕಂಡು ಭಯಭೀತರಾದ ಸಿಬ್ಬಂದಿ, ಸತ್ಯವನ್ನು ಮರೆಮಾಚಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಸುಳ್ಳು ಹೇಳಿ ಅವರನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಅಲ್ಲಿ ವೈದ್ಯರು ಅಲ್ಟ್ರಾಸೌಂಡ್ ಮಾಡಿದಾಗ ಗರ್ಭದಲ್ಲಿ ಮಗುವಿನ ಕತ್ತರಿಸಿದ ತಲೆ ಇರುವುದು ಕಂಡುಬಂದು ದಂಗಾಗಿದ್ದಾರೆ.

ಪ್ರಸ್ತುತ ಸ್ಥಿತಿ: ವೈದ್ಯರು ತಕ್ಷಣವೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಮಗುವಿನ ತಲೆಯನ್ನು ಹೊರತೆಗೆದಿದ್ದಾರೆ. ಅದೃಷ್ಟವಶಾತ್ ತಾಯಿ ಪ್ರಸ್ತುತ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ಮಂದಗತಿಯ ಕ್ರಮದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular