HomeLatest NewsBREAKING : ಆದಿಚುಂಚನಗಿರಿ ಕ್ಷೇತ್ರದಲ್ಲಿ 'ಗುರು ಭೈರವೈಕ್ಯ ಮಂದಿರ' ಉದ್ಘಾಟಿಸಿದ ಪ್ರಧಾನಿ ಮೋದಿ |WATCH...

BREAKING : ಆದಿಚುಂಚನಗಿರಿ ಕ್ಷೇತ್ರದಲ್ಲಿ ‘ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ |WATCH VIDEO

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್ 15, 2026) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಪವಿತ್ರ ಕ್ಷೇತ್ರವಾದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದರು.

ಬೆಂಗಳೂರಿನ ಹೆಚ್ ಎ ಎಲ್ ಗೆ ಆಗಮಿಸಿದ ಪ್ರಧಾನಿಯವರು ನಂತರ ಅಲ್ಲಿಂದ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದರು. ಅಧಿದೇವತೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು. ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪ್ರಧಾನಿಯನ್ನು ಬರಮಾಡಿಕೊಂಡು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಭೈರವೈಕ್ಯ ಮಂದಿರ ಲೋಕಾರ್ಪಣೆ: ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣಗೊಂಡಿರುವ, ಮಠದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತಿತರರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು ಮತ್ತು ಮಧ್ಯಾಹ್ನದವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.. ಪೂಜೆಯ ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮೋದಿ ಅವರು ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular