HomeKarnatakaBIG NEWS: ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು...

BIG NEWS: ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

2025-2026ನೇ ಸಾಲಿನ ಎಸ್ಎಸ್ಎಸ್​ಸಿ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಸರ್ಕಾರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್.ವಿ. ನಾಯ್ಕ್ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್ಎಸ್ಎಸ್​ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹೇಳಿಕೆ ನೀಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮುಖ್ಯಸ್ಥರು 2024 ಅ.18 ಮತ್ತು 2025ರ ಅ.28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿದ್ದರು. ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಅದರಲ್ಲಿ ಲಿಖಿತ ಪರೀಕ್ಷೆಯ ಮೌಲ್ಯ ಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆ 20 ಅಂಕ ನೀಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೆ, ಕೊನೆ ಹಂತದಲ್ಲಿ ಅಂದರೆ ಎಸ್ಎಸ್ಎಸ್​ಸಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಸರ್ಕಾರ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಪಿಎಸ್​ಸಿ ಸೇರಿದಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಅನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ರಾಜ್ಯ ಸರ್ಕಾರ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಿಲಿಗೆ ಗ್ರೇಂಡಿಗ್ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳ/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ 2025-2026ನೇ ಸಾಲಿನ ಎಸ್ಎಸ್ಎಸ್​ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಸರ್ಕಾರ ಹಾಗೂ ಮಂಡಳಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್ ನೀಡುವ ಬಗ್ಗೆ ರಾಜ್ಯ ಸರ್ಕಾರ ನೋಟಿಫಿಕೇಷನ್/ಸುತ್ತೋಲೆ ಹೊರಡಿಸಿದೆಯೇ ಎಂದು ಸರ್ಕಾರಿ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿದ್ದು, ಈ ಕುರಿತು ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಅಂಶ ಪರಿಗಣಿಸಿದ ನ್ಯಾಯಪೀಠ, 2025-2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಕುರಿತು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ನೀಡಿದ್ದ ಹೇಳಿಕೆಗೆ ಆಕ್ಷೇಪಿಸಿ ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠ ಇತ್ತೀಚೆಗೆ ರದ್ದುಪಡಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular