ಬೆಂಗಳೂರು: ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗಳ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ವಿಜಯನಗರ, ಬಾಣಸವಾಡಿ, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಹೊರ ರಾಜ್ಯದ ಮಹಿಳೆಯರು ಸೇರಿದಂತೆ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅನೇಕ ದಿನಗಳಿಂದ ಮನೆಗಳನ್ನು ಬಾಡಿಗೆ ಪಡೆದು ಆರೋಪಿತ ಮಹಿಳೆಯರು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ.

