HomeIndiaBREAKING: ಮಂತ್ರಾಲಯ ಬಳಿ ಭೀಕರ ಅಪಘಾತ: ಚಿಕ್ಕಮಗಳೂರಿನ 8 ಭಕ್ತರು ಸಾವು

BREAKING: ಮಂತ್ರಾಲಯ ಬಳಿ ಭೀಕರ ಅಪಘಾತ: ಚಿಕ್ಕಮಗಳೂರಿನ 8 ಭಕ್ತರು ಸಾವು

ಕರ್ನೂಲ್: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 8 ಭಕ್ತರು ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಗೂಡ್ಸ್ ವಾಹನದಲ್ಲಿದ್ದ ಚಿಕ್ಕಮಗಳೂರಿನ ಎಂಟು ಜನ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್  ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಗೂಡ್ಸ್ ವಾಹನದಲ್ಲಿ 21 ಭಕ್ತರು ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಆರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ 13 ಜನರನ್ನು ಎಮಿಗನೂರು, ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular