HomeIPL 2026IPL 2026: ಹೈದರಾಬಾದ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ತಂಡ ಸೇರಲಿದ್ದಾರೆ ಅಸಲಿ ನಾಯಕ

IPL 2026: ಹೈದರಾಬಾದ್ ಅಭಿಮಾನಿಗಳಿಗೆ ಗುಡ್‌ನ್ಯೂಸ್; ತಂಡ ಸೇರಲಿದ್ದಾರೆ ಅಸಲಿ ನಾಯಕ

ಸನ್ ರೈಸರ್ಸ್ ಹೈದರಾಬಾದ್ ತಂಡದ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದು ಸಿಕ್ಕಿದೆ. ಕಳೆದ ಕೆಲವು ಪಂದ್ಯಗಳಿಂದ ತಂಡದಿಂದ ದೂರ ಉಳಿದಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಪ್ಯಾಟ್ ಕಮ್ಮಿನ್ಸ್ ಈಗ ಸಂಪೂರ್ಣ ಫಿಟ್ ಆಗಿದ್ದು ಐಪಿಎಲ್ ಅಂಗಳಕ್ಕೆ ಮರಳಲು ಸಜ್ಜಾಗಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೈದ್ಯಕೀಯ ತಪಾಸಣೆಯ ನಂತರ ಬೌಲಿಂಗ್ ಮಾಡಲು ಹಸಿರು ನಿಶಾನೆ ಸಿಕ್ಕಿದೆ.

ಕಳೆದ ವರ್ಷದಿಂದ ಬೆನ್ನು ನೋವಿನ ಸಮಸ್ಯೆಯಿಂದಾಗಿ ಪ್ಯಾಟ್ ಕಮ್ಮಿನ್ಸ್ ಅಂತರಾಷ್ಟ್ರೀಯ ಕ್ರಿಕೆಟ್ ನಿಂದಲೂ ದೂರ ಉಳಿಯಬೇಕಾಗಿ ಬಂದಿತ್ತು. ಇದೇ ಕಾರಣಕ್ಕೆ ಪ್ರಸಕ್ತ ಐಪಿಎಲ್ ಆವೃತ್ತಿಯ ಮೊದಲ ಐದು ಪಂದ್ಯಗಳಲ್ಲಿ ಅವರು ಹೈದರಾಬಾದ್ ಪರ ಕಣಕ್ಕಿಳಿದಿರಲಿಲ್ಲ. ಸಿಡ್ನಿಯಲ್ಲಿ ನಡೆದ ಹೊಸ ಸ್ಕ್ಯಾನಿಂಗ್ ವರದಿಗಳಲ್ಲಿ ಅವರ ಗಾಯ ವಾಸಿಯಾಗಿರುವುದು ದೃಢಪಟ್ಟಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮಾಹಿತಿ ನೀಡಿದೆ. ಸದ್ಯದಲ್ಲೇ ಅವರು ಭಾರತಕ್ಕೆ ಪ್ರಯಾಣ ಬೆಳೆಸಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಹೈದರಾಬಾದ್ ತಂಡವು ಮುಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯದಲ್ಲಿ ಕಮ್ಮಿನ್ಸ್ ಆಡುವುದು ಅನುಮಾನ ಎನ್ನಲಾಗಿದೆ. ಗಾಯದಿಂದ ಚೇತರಿಸಿಕೊಂಡ ತಕ್ಷಣವೇ ಅವರನ್ನು ಕಣಕ್ಕಿಳಿಸಿ ಮರು ಅಪಾಯ ಮೈಮೇಲೆ ಎಳೆದುಕೊಳ್ಳಲು ಮ್ಯಾನೇಜ್ಮೆಂಟ್ ಸಿದ್ಧವಿಲ್ಲ. ಹೀಗಾಗಿ ಏಪ್ರಿಲ್ 25 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಮೂಲಕ ಅವರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಹೈದರಾಬಾದ್ ತಂಡವು ಯುವ ಆಟಗಾರರಾದ ಪ್ರಫುಲ್ ಹಿಂಗೆ ಮತ್ತು ಸಾಕಿಬ್ ಹುಸೇನ್ ಅವರ ಅಮೋಘ ಬೌಲಿಂಗ್ ನೆರವಿನಿಂದ ಗೆಲುವಿನ ಲಯದಲ್ಲಿದೆ. ಈಗ ಪ್ಯಾಟ್ ಕಮ್ಮಿನ್ಸ್ ಮರಳುತ್ತಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಶಕ್ತಿ ನೀಡಲಿದೆ. ಟೂರ್ನಿಯ ದ್ವಿತೀಯಾರ್ಧದಲ್ಲಿ ಕಮ್ಮಿನ್ಸ್ ಅವರು ಇಶಾನ್ ಕಿಶನ್ ಅವರಿಂದ ತಂಡದ ನಾಯಕತ್ವದ ಜವಾಬ್ದಾರಿಯನ್ನು ಮರಳಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular