HomeKarnatakaಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣ: ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣ: ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ

ಶಿವಮೊಗ್ಗ: ಸ್ನೇಹಿತರ ಜಗಳಬಿಡಿಸಲು ಹೋಗಿ ಭೀಕರವಾಗಿ ಕೊಲೆಯಾಗಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಂಕೇತ್​​ ಸಮಾಧಿ ಧ್ವಂಸಗೊಳಿಸಿದ್ದ ಪ್ರಕರಣ ಸಂಬಂಧ ಅಪ್ರಾಪ್ತ ಆರೋಪಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಕೇತ್​​ ಕೊಲೆ ಕೇಸ್​​ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಸಮಾಧಿ ಧ್ವಂಸಗೊಳಿಸಿದ್ದ. ಮಾರ್ಚ್​​ 31ರಂದು ಸಂಕೇತ್​​ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಅಂತಿಮವಾಗಿ ತ್ತಾಂತ್ರಿಕ ಆಧಾರದ ಹಿನ್ನೆಲೆಯಲ್ಲಿ ಸಮಾಧಿ ಕೆಡವಿದ್ದ ಅಪ್ರಾಪ್ತ ಆರೋಪಿಯನ್ನ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನಲೆಯಲ್ಲಿ ಶಿವಮೊಗ್ಗ ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ತೆಗೆದುಕೊಳ್ಳಲಾಗುತ್ತಿತ್ತು. ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿರೋದನ್ನು ಸಂಕೇತ್​​ ನೋಡಿದ್ದ. ಹೀಗಾಗಿ ಗಿರೀಶ್​ನನ್ನು ರಕ್ಷಿಸಲು ಸಂಕೇತ್ ಹೋಗಿದ್ದ. ಆ ವೇಳೆ ಐವರು ಬಾಲಕರು ಸಂಕೇತ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇದರಿಂದ ಸಂಕೇತ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ.

ಸಂಕೇತ್​​ನ ಅಂತ್ಯಕ್ರಿಯೆಯನ್ನು ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಪೋಷಕರು ನೆರವೇರಿಸಿದ್ದರು. ಮಗನ ನೆನಪಿಗಾಗಿ ಮಾ.26ರಂದು ಸಮಾಧಿಯನ್ನು ನಿರ್ಮಿಸಿದ್ದರು. ಅದಾಗಿ ಕೆಲ ದಿನಗಳು ಕಳೆಯುವುದರೊಳಗೆ ಸಂಕೇತ್​​ ಸಮಾಧಿಯನ್ನೂ ಧ್ವಂಸಗೊಳಿಸಲಾಗಿತ್ತು.

ಸಮಾಧಿಯನ್ನು ಕಲ್ಲಿನಿಂದ ಜಜ್ಜಿದ್ದಲ್ಲದೆ, ಗ್ರಾನೈಟ್​​ಗಳನ್ನು ಒಡೆದುಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆ ತನಿಖೆಗಿಳಿದ ಪೊಲೀಸು ಸದ್ಯ ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ನೇಹಿತರು ಜೈಲುಗೆ ಹೋದರೆಂಬ ಬೇಸರಕ್ಕೆ ಬಾಲಕ ಈ ಕೃತ್ಯವೆಸಗಿದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular