HomeKarnatakaBREAKING: 114 ಜಿಲ್ಲಾ ನ್ಯಾಯಾಧೀಶರ ದಿಢೀರ್ ವರ್ಗಾವಣೆ

BREAKING: 114 ಜಿಲ್ಲಾ ನ್ಯಾಯಾಧೀಶರ ದಿಢೀರ್ ವರ್ಗಾವಣೆ

ಬೆಂಗಳೂರು: 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ರೊಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೇರಿದಂತೆ 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜೂನ್ 1ರಿಂದ ಹೊಸ ಕಾರ್ಯಾಭಾರ ವಹಿಸಿಕೊಳ್ಳಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರಿಂದ ತೆರವಾದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಆಗಿ ಕೆ.ಬಿ.ಶಿವಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಕೆ.ಬಿ.ಶಿವಪ್ರಸಾದ್ ಸದ್ಯ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದೆ.

ಕೆ.ಎಸ್.ಭರತ್ ಅವರನ್ನು ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧಿಶರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular