HomeKarnataka5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಸೂಚನೆ

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಸೂಚನೆ

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಿಕೊಳ್ಳುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.

 5 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್‌ ಗಾಗಿ (Mandatory Biometric Update) ಎಂದಿನಂತೆ ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ 2026ರ ಸೆಪ್ಟೆಂಬರ್ 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ.

ಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ದಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಈ ಪ್ರಯುಕ್ತ ಜಿಲ್ಲೆಯ ಎಲ್ಲಾ ಪೋಷಕರು ಈ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನುವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular