HomeKarnatakaಚಿತ್ತಾಪುರದ 2887 ಎಕರೆ ಸಂರಕ್ಷಿತ ಅರಣ್ಯ ಘೋಷಣೆಗೆ ನಿರ್ಧಾರ

ಚಿತ್ತಾಪುರದ 2887 ಎಕರೆ ಸಂರಕ್ಷಿತ ಅರಣ್ಯ ಘೋಷಣೆಗೆ ನಿರ್ಧಾರ

ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಅಲ್ಲೂರು(ಬಿ) ಗ್ರಾಮದ 2887 ಎಕರೆ ಅರಣ್ಯವನ್ನು ಸಂರಕ್ಷಿತ ಮೀಸಲು ಎಂದು ಘೋಷಿಸಲು ರಾಜ್ಯ ವನ್ಯಜೀವಿ ಮಂಡಳಿ ನಿರ್ಧರಿಸಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಮಂಡಳಿಯ 6ನೇ ಸಭೆ ನಡೆಸಲಾಗಿದೆ. ಬೆಟ್ಟಗುಡ್ಡಗಳಿಂದ ಕೂಡಿದ ಹಚ್ಚಹಸುರಿನ ರಮಣೀಯವಾದ ಈ ಅರಣ್ಯ ಪ್ರದೇಶದ ಚಿರತೆ, ಕಾಡು ಹಂದಿ, ಜಿಂಕೆ, ಕಾಡು ಕುರಿ, ಕಾಡು ಬೆಕ್ಕು, ನರಿ ಮುಂತಾದ ವನ್ಯಜೀವಿಗಳ ಆವಾಸ ಸ್ಥಾನವಾಗಿದ್ದು, ಈ ಪ್ರದೇಶವನ್ನು ಸಂರಕ್ಷಿತ ಮೀಸಲು ಎಂದು ಘೋಷಿಸಲು ಯೋಗ್ಯವಾಗಿದೆ ಎಂದು ವನ್ಯಜೀವಿ ಮಂಡಳಿ ಸಭೆ ತೀರ್ಮಾನಿಸಿದೆ.

ಈ ಪ್ರದೇಶವು ಸಂರಕ್ಷಿತ ಮೀಸಲು ಎಂದು ಘೋಷಿಸಲು ಯೋಗ್ಯವಾಗಿದೆ. ಈ ಕುರಿತಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಕಲಂ 36 ಎ ರೀತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆಯಲ್ಲಿಯೂ ಚರ್ಚಿಸಿ ಸಂರಕ್ಷಿತ ಮೀಸಲು ಎಂದು ಘೋಷಿಸಲು ಸಮ್ಮತಿ ಪಡೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular