HomeKarnatakaಖಾಸಗಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಅರ್ಜಿ ಆಹ್ವಾನ

ಖಾಸಗಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು 1999ರ ನಿಯಮದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಆಡಳಿತ ಮಂಡಳಿಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಏಪ್ರಿಲ್ 15 ರಿಂದ ಮೇ 2 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

ಸ್ವೀಕೃತ ಪ್ರಸ್ತಾವನೆಗಳ ಪರಿಶಿಷ್ಟ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಮೇ 8ರವರೆಗೆ ಅವಕಾಶವಿದೆ. ಆಯುಕ್ತರ ಕಚೇರಿಯಿಂದ ಅನುಮೋದನೆ ಪಡೆದು ಅರ್ಜಿಗಳು ವಾಪಾಸ್ ಆಗುವ ಪ್ರಕ್ರಿಯೆ ಮೇ 16ರೊಳಗೆ ಪೂರ್ಣವಾಗಲಿದೆ. ವರ್ಗಾವಣೆಯಾದ ಶಿಕ್ಷಕರು ಹೊಸ ಸ್ಥಳದಲ್ಲಿ ಕೆಲಸಕ್ಕೆ ಹಾಜರಾಗಲು ಮೇ 30ರವರೆಗೆ ಅವಕಾಶವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೇ ಆಡಳಿತ ಮಂಡಳಿಯ ಬೇರೆ ಬೇರೆ ಶಾಲೆಗಳು ಅಥವಾ ಬೇರೆ ಆಡಳಿತ ಮಂಡಳಿಯ ಶಾಲೆಗಳಿಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು. ವರ್ಗಾವಣೆ ಬಯಸುವ ಶಾಲೆಗಳು ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಿರಬೇಕು. ಬೇರೆ ಆಡಳಿತ ಮಂಡಳಿ ಶಾಲೆಗಳಿಗೆ ವರ್ಗಾವಣೆ ಬಯಸಿದಲ್ಲಿ ಎರಡೂ ಶಾಲೆಗಳ ಆಡಳಿತ ಮಂಡಳಿಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು. ಕಾಲಮಿತಿ ಮೀರಿದ ನಂತರ ಸಲ್ಲಿಕೆಯಾದ ಪ್ರಸ್ತಾವನೆಗಳನ್ನು ಪರಿಗಣಿಸುವುದಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular