HomeLatest NewsBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿಯಾಗಿ...

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಜೀವ ದಹನ.!

ಯಾದಗಿರಿ : ರಾಜ್ಯದಲ್ಲಿ ರಸ್ತೆ ರಕ್ಕಸನ ಅಬ್ಬರ ಮುಂದುವರಿದಿದ್ದು, ಯಾದಗಿರಿ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.ಕಾರು ಹಾಗೂ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ  ಕಾರಿಗೆ ಬೆಂಕಿ ತಗುಲಿ 6 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ.

ಘಟನೆಯ ವಿವರ:

ಸುರಪುರ ತಾಲೂಕಿನ ದೇವಾಪುರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಹಾಗೂ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ  ಕಾರಿಗೆ ಬೆಂಕಿ ತಗುಲಿ 6 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯ: ಪ್ರಾಥಮಿಕ ಮಾಹಿತಿಯ ಪ್ರಕಾರ ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ರಸ್ತೆ ಚಿಕ್ಕದಾಗಿದ್ದ ಕಾರಣ  ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಭೇಟಿ:

ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular