HomeKarnatakaBREAKING : ಯಾದಗಿರಿಯಲ್ಲಿ ಭೀಕರ ಅಪಘಾತ ; ಬಸ್-ಕಾರು ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು 6...

BREAKING : ಯಾದಗಿರಿಯಲ್ಲಿ ಭೀಕರ ಅಪಘಾತ ; ಬಸ್-ಕಾರು ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು 6 ಮಂದಿ ಸಜೀವ ದಹನ

ಯಾದಗಿರಿ/ಸುರಪುರ:: ರಸ್ತೆ ಅಪಘಾತವೊಂದು ಅಕ್ಷರಶಃ ಸಾವಿನ ಸುಳಿಯಾಗಿ ಪರಿಣಮಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಆರೂ ಮಂದಿ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಈ ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಹೌದು. ರಾಜ್ಯದಲ್ಲಿ ಇಂದು   ಭೀಕರ ರಸ್ತೆ ದುರಂತವೊಂದು ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.

ಘಟನೆಯ ವಿವರ:

ಯಾದಗಿರಿಯಿಂದ ರಾಯಚೂರು ಕಡೆಗೆ ಹೊರಟಿದ್ದ ಕಾರು ಮತ್ತು ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಜೀವ ದಹನ:

ಕಾರಿನಲ್ಲಿದ್ದ ಆರು ಮಂದಿ ಹೊರಬರಲಾಗದೆ ಬೆಂಕಿಯ ಜ್ವಾಲೆಗೆ ಸಿಲುಕಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ತೀವ್ರತೆಯಿಂದಾಗಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಸಿಗದ ಸ್ಥಿತಿಯಲ್ಲಿದೆ. ಬಸ್‌ಗೂ ಸಹ ಬೆಂಕಿ ವ್ಯಾಪಿಸಿದ್ದು, ಪ್ರಯಾಣಿಕರ ಸ್ಥಿತಿಗತಿ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಅಗ್ನಿಶಾಮಕ ದಳದ ಕಾರ್ಯಾಚರಣೆ:

ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular