HomeKarnatakaಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಹೆಚ್ಚುತ್ತಲೇ ಇದೆ ಬಣ ಬಡಿದಾಟ: ಪಕ್ಷ ನಿಷ್ಠರೇ ಟಾರ್ಗೆಟ್:...

ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಹೆಚ್ಚುತ್ತಲೇ ಇದೆ ಬಣ ಬಡಿದಾಟ: ಪಕ್ಷ ನಿಷ್ಠರೇ ಟಾರ್ಗೆಟ್: ಸಿಎಂ ಸಿದ್ದರಾಮಯ್ಯ ನಡೆಗೆ ಆಪ್ತರಿಂದಲೇ ಅಸಮಾಧಾನ

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿನ ಬಣ ಬಡಿದಾಟ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರನ್ನೇ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಗುರಿಯಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಿದ್ದರೂ ತಮ್ಮ ಆಪ್ತರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಟ್ಟಿ ನಿಲುವು ತಳೆಯದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಸಿಎಂ ಅವರ ಈ ಅಸಹಾಯಕತೆ ಪಕ್ಷದ ಬೆಳವಣಿಗೆಗೆ ಹಿನ್ನಡೆಯಾಗಲಿದೆ ಎಂದು ಕೆ.ಎನ್. ರಾಜಣ್ಣ ಸೇರಿದಂತೆ ಹಲವು ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷಕ್ಕೆ ಕೆಲಸ ಮಾಡಿದವರನ್ನ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗ್ತಿದೆ. ಟಾರ್ಗೆಟ್ ಆಗ್ತಿರೋದು ಕೇವಲ ವ್ಯಕ್ತಿಗಳಲ್ಲ, ಬೇರೆ ಬೇರೆ ಸಮುದಾಯಗಳು. ಹೀಗಾಗಿ ಸಮುದಾಯಗಳು ಕಾಂಗ್ರೆಸ್ ವಿರುದ್ಧ ತಿರುಗಿ ಬೀಳುತ್ತಿವೆ ಎಂದು ಸಿದ್ದರಾಮಯ್ಯ ಆಪ್ತರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್​​. ರಾಜಣ್ಣ, ಯಾರೆಲ್ಲ ಪಕ್ಷಕ್ಕೆ ನಿಷ್ಠೆಯಿಂದ ಇರ್ತಾರೆ ಅವರ ವಿರುದ್ಧ ಕ್ರಮ ಆಗ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದಿಂದ ಬಡವರಿಗೆ ಅನುಕೂಲ ಆಗಬೇಕು ಎನ್ನುವವರಿಗೆ ಹೀಗೆ ಆಗ್ತಿದ್ದು, ಸಿಎಂ ಸಿದ್ದರಾಮಯ್ಯ ಇಂತಹ ಸಂದರ್ಭದಲ್ಲಿ ಗಟ್ಟಿಯಾಗಿ ನಿಲ್ಲುತ್ತಿಲ್ಲ ಅನ್ನೋದು ನಮಗೂ ಬೇಸರ ತಂದಿದೆ. ಸಿಎಂಗೆ ಯಾವ ಯೋಚನೆ ಇದೆಯೋ ಗೊತ್ತಿಲ್ಲ. ಆದರೆ ಅವರಿಂದ ಇಂತಹ ಅಸಹಾಯಕತೆ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ. ಅಲ್ಲದೆ ಬಿ.ವೈ.ರಾಘವೇಂದ್ರರನ್ನು ಗೆಲ್ಲಿಸಿ ಎಂದು ಈ ಹಿಂದೆ ಶಾಮನೂರು ಹೇಳಿದ್ದರು. ಆಗ ಅವರ ಮೇಲೆ ಯಾವುದೇ ಕ್ರಮ ಆಗಲಿಲ್ಲ. ಇನ್ನೊಂದು ಪಕ್ಷಕ್ಕೆ ಮತ‌ಹಾಕಿ ಅನ್ನೋದು ಅಶಿಸ್ತು ಅಲ್ಲವೇ? ರಾಜ್ಯ ನಾಯಕರ ಜತೆ ಚರ್ಚಿಸಿಯೇ ಹೈಕಮಾಂಡ್ ತೀರ್ಮಾನಿಸುವುದು ಎಂದು ಹೇಳಿದ್ದಾರೆ.

ಹೈಕಮಾಂಡ್​ನಿಂದ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಹೆಚ್​.ಸಿ.ಬಾಲಕೃಷ್ಣ, ಏನಾಗಿದೆ ಅಂತಾ ನಾವು ಕೂಡ ಇನ್ನೂ ಗೊಂದಲದಲ್ಲಿ ಇದ್ದೇವೆ. ಪಕ್ಷಕ್ಕೆ ವಿರೋಧವಾಗಿ ಯಾರೇ ಕೆಲಸ ಮಾಡಿದ್ರೂ ಟಾರ್ಗೆಟ್ ಆಗ್ತಾರೆ. ಸಿಎಂ, ಡಿಸಿಎಂ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ಅವರನ್ನೂ ಟಾರ್ಗೆಟ್ ಮಾಡ್ತಾರೆ. ಪಕ್ಷಕ್ಕಿಂತ ದೊಡ್ಡ ವ್ಯಕ್ತಿ ಇಲ್ಲಿ ಯಾರೂ ಇಲ್ಲ, ಪಕ್ಷವೇ ದೊಡ್ಡದು ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular