HomeLatest Newsಕ್ರಿಸ್ಟಲ್ AI ಸಂಸ್ಥೆಯಿಂದ ರೋಬೋಟ್ ಟ್ರೇಡಿಂಗ್ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಕಂಪನಿ ಎಂಡಿ...

ಕ್ರಿಸ್ಟಲ್ AI ಸಂಸ್ಥೆಯಿಂದ ರೋಬೋಟ್ ಟ್ರೇಡಿಂಗ್ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಕಂಪನಿ ಎಂಡಿ ಪೊಲೀಸ್ ವಶಕ್ಕೆ

ಬೆಂಗಳೂರು: ಟ್ರೇಟಿಂಗ್ ಕಂಪನಿಯೊಂದು ಹೋಡಿಕೆ ಹೆಸರಲ್ಲಿ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಕ್ರಿಸ್ಟಲ್ AI ಸಂಸ್ಥೆಯು ರೋಬೋಟ್ ಟ್ರೇಡಿಂಗ್ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಹಣ ಡಬಲ್ ಆಮಿಷವೊಡ್ಡಿ ಮೋಸ ಮಾಡಿದೆ. ವಂಚನೆ ಆರೋಪದಲ್ಲಿ ಸಂಸ್ಥೆಯ ಎಂಡಿ ರಾಜೇಶ್ ಕಾಮತ್ ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೋಬೋಟ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಮೂಲಕ ಹೂಡಿಕೆ ಮಾಡಿದ ಹಣವನ್ನು ಡಬಲ್ ಮಾಡಿಕೊಡಲಾಗುತ್ತದೆ ಎಂದು ನಂಬಿಸಿ ಜನರನ್ನು ಬಲೆಗೆ ಬೀಳಿಸಿರವುದು ತನಿಖೆಯಲ್ಲಿ ಬಯಲಾಗಿದೆ. 5 ರಿಂದ 6 ಕೋಟಿಗೂ ಅಧಿಕ ಹಣ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ದುಬೈನಲ್ಲಿ ಕಚೇರಿ ತೆರೆಯುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲೂ ವಂಚನೆ ಜಾಲ ವಿಸ್ತರಿಸಿರುವ ಮಾಹಿತಿ ಲಭ್ಯವಾಗಿದ್ದು, ರಾಜೇಶ್ ಕಾಮತ್ ಸೇರಿದಂತೆ ಮೂವರು ಆರೋಪಿಗಳು ಸಂಘಟಿತ ಸಂಚು ರೂಪಿಸಿ ಹೂಡಿಕೆದಾರರನ್ನು ವಂಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಕಂಪನಿ ಎಂಡಿ ರಾಜೇಶ್ ಕಾಮತ್ ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular