HomeKarnatakaಏ.24 ರಂದು ಅದ್ಧೂರಿಯಾಗಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ

ಏ.24 ರಂದು ಅದ್ಧೂರಿಯಾಗಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ

ಬಳ್ಳಾರಿ: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಏ.24 ರಂದು ಜಿಲ್ಲಾ ಕೇಂದ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಗುವುದು.

ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಡಾ.ರಾಜ್‌ಕುಮಾರ್ ಅವರು ಕನ್ನಡ ನಾಡು-ನುಡಿ, ಭಾಷೆ, ಸಂಸ್ಕೃತಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಹಾಡುಗಳು, ಸಿನಿಮಾಗಳು ಇಂದಿಗೂ ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಿದ್ದು, ಇದೇ ಏ.24 ರಂದು ಜಿಲ್ಲಾ ಕೇಂದ್ರದಲ್ಲಿ ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏ.24 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿರುವ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಮಾಡಲಾಗುವುದು. ಅಂದು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಾ.ರಾಜ್ ಕುಮಾರ್ ಅವರ ಸಿನಿ ಹಾಡುಗಳ ಪ್ರಸ್ತುತಪಡಿಸುವ ಗೀತ-ಗಾಯನ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಅವರು ಕನ್ನಡ ನಾಡು-ನುಡಿಗಾಗಿ ನೀಡಿದ ಕೊಡುಗೆ, ಅವರ ಜೀವನ ಚರಿತ್ರೆ, ಯಶೋಗಾಥೆ ಕುರಿತು ಈಗಿನ ಪೀಳಿಗೆಗೆ ಮನದಟ್ಟು ಮಾಡಲು ಚುಟುಕು ಉಪನ್ಯಾಸ ನೀಡಲು ವಿಶೇಷ ಉಪನ್ಯಾಸಕರನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳು, ಸ್ಥಳೀಯ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಮುಖಂಡರು, ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ಪದಾಧಿಕಾರಿಗಳು ಹಾಗೂ ಮತ್ತೀತರರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಡಾ.ರಾಜ್ ಕುಮಾರ್ ಉದ್ಯಾನವನದ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ. ಅವರು ಮಾತನಾಡಿ, ಉದ್ಯಾನವನದಲ್ಲಿರುವ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಸಿಎಸ್‌ಆರ್ ಅನುದಾನದಡಿ ಶಾಶ್ವತವಾದ ಮೆಟ್ಟಿಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಕುರಿತಂತೆ ತಮ್ಮ ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಸೇರಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular