HomeKarnatakaರಜಾ ದಿನವೂ ಜನಗಣತಿ, ಗೈರಾಗುವ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ

ರಜಾ ದಿನವೂ ಜನಗಣತಿ, ಗೈರಾಗುವ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ

ಬೆಂಗಳೂರು: ಜನಗಣತಿ ಕಾರ್ಯಕ್ಕೆ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಬಿಎ ಎಚ್ಚರಿಕೆ ನೀಡಿದೆ.

ಜನಗಣತಿ ಕಾರ್ಯಕ್ಕೆ ಗೈರು ಹಾಜರಾಗುವ ಸಿಬ್ಬಂದಿಗೆ ಒಂದು ಸಾವಿರ ರೂಪಾಯಿ ದಂಡದ ಜೊತೆಗೆ ಮೂರು ವರ್ಷ ಕಾರಾಗೃಹ ಶಿಕ್ಷೆ, ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ 1000 ರೂ. ದಂಡದ ಜೊತೆಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ, ಗೈರು ಹಾಜರಾತಿ ಅವಧಿಯನ್ನು ಡೈಸ್ ನಾನ್ ಎಂದು ಪರಿಗಣನೆ, ಸೇವಾ ನಿಯಮಾವಳಿಯಂತೆ ಶಿಸ್ತು ಕ್ರಮ ಮತ್ತು ಕಾನೂನು ಕ್ರಮ, ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಸಾವಿರಾರು ಸರ್ಕಾರಿ ನೌಕರರು ಗೈರು ಹಾಜರಾಗಿದ್ದು ಇದರಿಂದ ಗಣತಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ಏಪ್ರಿಲ್ 16 ರಿಂದ ಗಣಪತಿ ಆರಂಭವಾಗಿದ್ದು, ದಕ್ಷಿಣ ಪಾಲಿಕೆ ವ್ಯಾಪ್ತಿಯಲ್ಲಿ 1774 ನೌಕರರು, ಉತ್ತರ ಪಾಲಿಕೆಯಲ್ಲಿ 527 ನೌಕರರು ಗೈರು ಹಾಜರಾಗಿದ್ದಾರೆ. ಕೇಂದ್ರ, ಪಶ್ಚಿಮ ಪೂರ್ವ ಪಾಲಿಗೆಗಳಲ್ಲೂ ನೂರಾರು ಗಣತಿ ಸಿಬ್ಬಂದಿ ಗೈರು ಹಾಜರಾಗಿದ್ದಾರೆ. ಕೆಲವರು ಅನಧಿಕೃತವಾಗಿ ಗೈರು ಹಾಜರಾಗಿದ್ದು, ಮುಂದಿನ ದಿನಗಳಲ್ಲಿ ಎಫ್ಐಆರ್ ದಾಖಲಿಸಲಾಗುವುದು. ಹೀಗಾಗಿ ಗಣತಿ ಕಾರ್ಯಕ್ಕೆ ನೌಕರರು ಹಾಜರಾಗುವಂತೆ ಆಯಾ ಪಾಲಿಕೆಗಳ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ರಜಾ ದಿನವೂ ಗಣತಿ

ರಜಾ ದಿನವಾ ಭಾನುವಾರ ಮತ್ತು ಸೋಮವಾರದ ಬಸವ ಜಯಂತಿ ರಜೆ ದಿನದಂದು ಜನಗಣತಿ ಕಾರ್ಯ ನಡೆಯಲಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ. ಗಣತಿ ಕಾರ್ಯಕ್ಕೆ ಬರುವ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ನಾಗರಿಕರು ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular