HomeLatest NewsBIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಜನರು ದುರಂತ ಅಂತ್ಯ

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಜನರು ದುರಂತ ಅಂತ್ಯ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸರಣಿ ಸ್ಫೋಟ ಸಂಭವಿಸಿದ್ದು 16 ಜನರು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಕಟ್ಟನಾರ್ ಪಟ್ಟಿ ಗ್ರಾಮದ ಕಾರ್ಖಾನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಆರಂಭದಲ್ಲಿ ಪಟಾಕಿ ಘಟಕದ ರಾಸಾಯನಿಕ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಕಾರ್ಖಾನೆಯ ಇತರ ಭಾಗಗಳಿಗೆ ವ್ಯಾಪಿಸಿ ಸ್ಫೋಟ ಸಂಭವಿಸಿದೆ. ನಾಲ್ಕೈದು ಭಾರಿ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ 10ಕ್ಕೂ ಹೆಚ್ಚು ಕೊಠಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಈವರೆಗೆ 16 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ. ಅವಶೇಷಗಳಡಿಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪಟಾಕಿ ಕಾರ್ಖಾನೆ ದುರಂತಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ತಕ್ಷಣದ ಪರಿಹಾರವನ್ನು ಸರ್ಕಾರದಿಂದ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular