HomeKarnatakaಕಾವೇರಿ ನದಿಯಲ್ಲಿ 6 ಮಂದಿ ನೀರು ಪಾಲು: ಸಿಎಂ ಸಿದ್ಧರಾಮಯ್ಯ ಸಂತಾಪ: ತಲಾ 5 ಲಕ್ಷ...

ಕಾವೇರಿ ನದಿಯಲ್ಲಿ 6 ಮಂದಿ ನೀರು ಪಾಲು: ಸಿಎಂ ಸಿದ್ಧರಾಮಯ್ಯ ಸಂತಾಪ: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರು: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ 6 ಜನರು ಜಲಸಮಾಧಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ.

ಉರೂಸ್ ಹಿನ್ನೆಲೆಯಲ್ಲಿ ದರ್ಗಾಕ್ಕೆ ಬಂದಿದ್ದ ಕುಟುಂಬದವ 8 ಜನರು ಬಿಸಿಲ ಧಗೆಯಿಂದಾಗಿ ನದಿಯಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನರ ರಭಸಕ್ಕೆ ಸಿಲುಕಿ ಆರು ಜನರು ನಿರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಕೆ.ಆರ್‌ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ಧರಾಮಯ್ಯ ಸಂತಾಪ: ಪರಿಹಾರ ಘೋಷಣೆ

ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular