ಬೀದರ್: ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ವಿವಿ ಸಹ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ,
ಬೀದರ್ ಪಶು ವೈದ್ಯಕೀಯಮ ಪಶು, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದ ಬೆಂಗಳೂರಿನ ಹೆಬ್ಬಾಳದ ಪಶು ವೈದ್ಯ ಕಾಲೇಜಿನ ಸಹಪ್ರಾಧ್ಯಾಪಕ ಹೆಚ್.ಸಿ. ಇಂದ್ರೇಶ್ ಅವರನ್ನು ಅಮಾನತು ಮಾಡಿ ವಿವಿ ಕುಲಸಚಿವ ಪಿ.ಟಿ. ರಮೇಶ್ ಆದೇಶಿಸಿದ್ದಾರೆ.
ಇಂದ್ರೇಶ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಇಂದ್ರೇಶ್ ಅಕ್ರಮ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಕರ್ನಾಟಕ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಇಂದ್ರೇಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

