ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕಾರಣ ಪ್ರವೇಶಿಸಿ 50 ವಸಂತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9ರಂದು ಬೃಹತ್ ಸಮಾವೇಶ ನಡೆಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 4ದಂದು ಪ್ರಕಟವಾಗಲಿದ್ದು, ನಂತರ ಸಮಾವೇಶದಲ್ಲಿ ಭಾಗವಹಿಸುವುದಾಗಿ ಅಮಿತ್ ಶಾ ತಿಳಿಸಿದ್ದಾರೆ. ಬಹುತೇಕ ಮೇ 9ರಂದು ಚಿತ್ರದುರ್ಗದಲ್ಲಿ ಸಮಾವೇಶ ನಡೆಯಲಿದೆ. ಅಮಿತ್ ಶಾ ಬೇಟೆ ಮೇಲೆ ಸಮಯ ನಿಗದಿಯಾಗಿರುವುದರಿಂದ ದಿನಾಂಕ ಇನ್ನು ಅಂತಿಮಗೊಳಿಸಿಲ್ಲ. ಮೇ ತಿಂಗಳಿನಲ್ಲಿ ಸಮಾವೇಶ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

