HomeLatest NewsBIG NEWS : ಏ.24 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ...

BIG NEWS : ಏ.24 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Karnataka Cabinet Meeting

ಬೆಂಗಳೂರು: ಕರ್ನಾಟಕ ಸರ್ಕಾರವು ಇದೇ ಏಪ್ರಿಲ್ 24ರಂದು ಸಚಿವ ಸಂಪುಟದ ವಿಶೇಷ ಸಭೆಯನ್ನು ಕರೆದಿದೆ. ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಅವರು ಈ ಕುರಿತು ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.

ಈ ವಿಶೇಷ ಸಭೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ಬಾಕಿ ಇರುವ 65,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಪರಿಶಿಷ್ಟ ಜಾತಿ (SC) ಒಳ ಮೀಸಲಾತಿ ಜಾರಿಯ ಕುರಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ವಿಶೇಷವಾಗಿ, ಒಳ ಮೀಸಲಾತಿ ಹಂಚಿಕೆಯ ಅನುಪಾತದ ಬಗ್ಗೆ ತಾಂತ್ರಿಕ ಸಮಿತಿಯು ನೀಡುವ ವರದಿಯನ್ನು ಈ ಸಭೆಯಲ್ಲಿ ಚರ್ಚಿಸಿ, ಅಂತಿಮ ಮೊಹರು ಒತ್ತಲಾಗುವುದು ಎಂದು ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯ ವಿವರಗಳು:

  • ದಿನಾಂಕ: ಏಪ್ರಿಲ್ 24, 2026 (ಶುಕ್ರವಾರ)
  • ಸಮಯ: ಮಧ್ಯಾಹ್ನ 2:00 ಗಂಟೆಗೆ
  • ಸ್ಥಳ: ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular