HomeLive Newsಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಕಿರುಕುಳಕ್ಕೆ ನೊಂದ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಕಿರುಕುಳಕ್ಕೆ ನೊಂದ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

ಬೆಂಗಳೂರು: ಶೈಬರ್ ವಂಚಕರ ಕೈಗೆ ಬಿ.ಟೆಕ್ ವಿದ್ಯಾರ್ಥಿಯೊಬ್ಬನ ಖಾಸಗಿ ವಿಡಿಯೋಗಳು ಸಿಕ್ಕಿದ್ದು, ಬ್ಲ್ಯಾಕ್ ಮೇಲ್ ಗೆ ಹೆದರಿದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೈಬರ್ ವಂಚಕರ ಕಿರುಕುಳಕ್ಕೆ ನೊಂದು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ನಾಪತ್ತೆಯಾಗಿರುವ ವಿದ್ಯಾರ್ಥಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ ಬೆಂಗಳೂರಿಗೆ ಬಂದಿದ್ದ. ಯುವಕ ಮತ್ತು ಯುವತಿ ಒಟ್ಟಿಗೆ ವಾಸವಾಗಿದ್ದು, ಕೆಲ ದಿನಗಳ ಹಿಂದೆ ಯುವಕ ಚಿನ್ಮಯ್ ಮೊಬೈಲ್‌ಗೆ ಆತನದ್ದೇ ಖಾಸಗಿ ಫೋಟೋಗಳು ಬಂದಿತ್ತು. ಸೈಬರ್ ವಂಚಕರು, ಇನ್ನೂ ಹಲವು ಖಾಸಗಿ ಫೋಟೋಗಳಿವೆ. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ವಿಡಿಯೋ ವೈರಲ್ ಆಗಬಾರದೆಂದರೆ ಹಣ ನೀಡುವಂತೆ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಹೇಳಿದಷ್ಟು ಹಣ ಕೊಟ್ಟರೆ ಬಿಡುವುದಾಗಿ ಬೆದರಿಸಿದ್ದರು. ಇದರಿಂದ ನೊಂದಿದ್ದ ಯುವಕ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾನೆ.

ಏ.15ರಂದು ಕಸ ಹಾಕಲು ಹೊರಗೆ ಹೋದವನು ವಾಪಸ್ ಮನೆಗೆ ಬಂದಿಲ್ಲ. ಯುವಕ ಕಿಡ್ನ್ಯಾಪ್ ಆಗಿದ್ದಾನಾ ಅಥವಾ ಆತನೇ ನಾಪತ್ತೆಯಾಗಿದ್ದಾನಾ? ಎಂಬುದೂ ಗೊತ್ತಾಗುತ್ತಿಲ್ಲ. ಸದ್ಯ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಬಿ.ಟೆಕ್ ವಿದ್ಯಾರ್ಥಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular