HomeKarnatakaALERT: ರಾಜ್ಯದ ಜನತೆ ಇರಲಿ ಎಚ್ಚರ: ಮುಂದಿನ ಒಂದುವಾರ ಬೀಸಲಿದೆ ಬಿಸಿ ಗಾಳಿ: ಹವಾಮಾನ ಇಲಾಖೆ...

ALERT: ರಾಜ್ಯದ ಜನತೆ ಇರಲಿ ಎಚ್ಚರ: ಮುಂದಿನ ಒಂದುವಾರ ಬೀಸಲಿದೆ ಬಿಸಿ ಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದಾಗಿ ಇಡೀ ಕರುನಾಡು ಕಾದ ಕಾವಲಿಯಂತಾಗಿದೆ. ಬಿಸಿಲ ಝಳದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೀಟ್ ಸ್ಟ್ರೋಕ್ ನಂತಹ ಅನಾರೋಗ್ಯ ಹೆಚ್ಚುತ್ತಿದೆ. ಈನಡುವೆ ರಾಜ್ಯದಲ್ಲಿ ಮುಂದಿನ ಒಂದುವಾರಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತಾಪಮಾನ 41 ಡಿಗ್ರಿ ದಾಟಿದೆ.ಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್ ಆರಂಭವಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಉತ್ತರ ಒಳನಾಡಿನ ಬೀದರ್, ಕಲೌರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ, ಕೊಪ್ಪಳ ಜಿಲ್ಲೆಗಳು ಹಾಗೂ ಕರಾವಳಿ ಜಿಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 27ರವರೆಗೆ ಬಿಸಿ ಗಾಳಿ ಬೀಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಪಮಾನ, ರಣ ಬಿಸಿಲಿನಿಂದಾಗಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೂ ಉಷ್ಣ ಅಲೆ, ಸೆಖೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನರು ಉಷ್ಣ ಅಲೆಯಿಂದ ರಕ್ಷಿಸಿಕೊಳ್ಳಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ, ಕಚೇರಿಗಳಿಂದ ಹೊರ ಹೋಗದಂತೆ ಹಾಗೂ ನಿಯಮಿತವಾಗಿ ನೀರು ಸೇವನೆ ಮಾಡುವಂತೆ ಹಾಗೂ ಆರೋಗ್ಯದ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular