HomeLatest NewsBIG NEWS: ರಾಜ್ಯದಲ್ಲಿ ಬಿಸಿ ಗಾಳಿ, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ ದಿನೇಶ್...

BIG NEWS: ರಾಜ್ಯದಲ್ಲಿ ಬಿಸಿ ಗಾಳಿ, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್, ಎಮರ್ಜೆನ್ಸಿ ಬೆಡ್ ಮೀಸಲಿಡಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಜನರು ಬಿಸಿಲಿನಲ್ಲಿ ಹೊರ ಹೋಗುವುದನ್ನು ಅವೈಡ್ ಮಾಡಿ. ಬಿಸಿ ಗಾಳಿ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಬಿಸಿಲಿದೆ. ಈ ಬಾರಿ ಮಳೆ ಕೂಡ ಕಡಿಮೆ ಇರುವುದರಿಂದ ತೀವ್ರ ಸವಾಲು ಎದುರಾಗಿದೆ. ರಾಜ್ಯದಲ್ಲಿ ಬಿಸಿ ಗಾಳಿ ಬೀಸುತ್ತಿರುವುದರಿಂದ ಅನಾರೋಗ್ಯ ಸಮಸ್ಯೆ ಎದುರಾಗಬಹುದು. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಸಿಲಿನ ತಾಪಕ್ಕೆ ಈಗಾಗಲೇ ರಾಜ್ಯದಲ್ಲಿ ಒಂದು ಸಾವು ವರದಿಯಾಗಿದೆ. ಬೀದರ್‌ನಲ್ಲಿ 20 ವರ್ಷದ ಯುವಕ ಹೀಟ್‌ಸ್ಟ್ರೋಕ್‌ಗೆ ಬಲಿಯಾಗಿದ್ದಾನೆ. ಈ ಬಾರಿ ರಾಜ್ಯದಲ್ಲಿ ಎಂದೂ ಕಾಣದಂತಹ ದಾಖಲೆ ಮಟ್ಟದ ಉಷ್ಣಾಂಶ ದಾಖಲಾಗುತ್ತಿದೆ. ಮಳೆಯೂ ಇಲ್ಲದ ಕಾರಣ ಪರಿಸ್ಥಿತಿ ಮತ್ತಷ್ಟು ಸವಾಲಾಗಿ ಪರಿಣಮಿಸಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಖರತೆ ವಿಪರೀತವಾಗಿದೆ ಎಂದರು

ಬಿಸಿಲ ಝಳದಿಂದ ಹೀಟ್ ಸ್ಟ್ರೋಕ್ ನಂತ ಸಮಸ್ಯೆಯಾದವರಿಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹೀಟ್ ಸ್ಟ್ರೋಕ್ ವಾರ್ಡ್ ಗೆ ಸೂಚಿಸಲಾಗಿದೆ. ಪ್ರತ್ಯೇಕ ವಾರ್ಡ್ ಮತ್ತು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆಗಾಗಿ ವೈದ್ಯರು ಸನ್ನದ್ಧರಾಗಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ. ಬಿಸಿ ಗಾಳಿಯ ಪ್ರಭಾವ ಇರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಚಿವರು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು, ಅಲ್ಲಿನ ಜನರು ಮನೆಯಿಂದ ಹೊರಬರುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲಾ ಆಸ್ಪತ್ರೆಗಳಲ್ಲಿ ಈಗಾಗಲೇ ಅಗತ್ಯ ಔಷಧಿ ಮತ್ತು ಚಿಕಿತ್ಸಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರಸ್ತುತ 40 ರಿಂದ 41 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಿಸಿ ಗಾಳಿ ಮತ್ತು ಉಷ್ಣಾಘಾತದ ಭೀತಿಯ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಿಸಿಲಿನ ಹೊಡೆತಕ್ಕೆ ಒಳಗಾಗುವವರಿಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಹೀಟ್ ಸ್ಟ್ರೋಕ್ ವಾರ್ಡ್ ಸಿದ್ಧಪಡಿಸಲಾಗಿದೆ. ಈ ವಾರ್ಡ್‌ನಲ್ಲಿ ಒಟ್ಟು 10 ಸುಸಜ್ಜಿತ ಬೆಡ್‌ಗಳಿದ್ದು, ಇವುಗಳನ್ನು ಐಸಿಯು ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ವಿಶೇಷ ವಾರ್ಡ್‌ನ ನಿರ್ವಹಣೆಗಾಗಿ ಇಬ್ಬರು ನರ್ಸ್‌ಗಳು ಹಾಗೂ ಪ್ರತ್ಯೇಕ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular