HomeLive NewsBREAKING: ಪ್ರಿಯತಮೆಯ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

BREAKING: ಪ್ರಿಯತಮೆಯ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಪ್ರಿಯತಮೆಯ ಮನೆಯಲ್ಲಿ ಯುವಕನೊಬ್ಬ ಪೆಟ್ರೋಲ್ ಸುರುದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಅಂಜನಾಪುರದಲ್ಲಿ ನಡೆದಿದೆ.

ಕಿರಣ್ ಆತ್ಮಹತ್ಯೆಗೆ ಶರಣಾದ ಯುವಕ. ಈ ವೇಳೆ ಪ್ರೇಯಸಿಗೂ ಬೆಂಕಿ ಹಚ್ಚಿ ಸಾಯಿಸಲು ಕಿರಣ್ ಯತ್ನಿಸಿದ್ದು, ಯುವತಿ ಸಣ್ಣಪುಟ್ಟ ಸುಟ್ಟ ಗಾಯಗಳಿಂದ ಪಾರಾಗಿದ್ದಾಳೆ. ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿರಣ್ ಹಾಗೂ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿದೆ. ಯುವತಿ ತಾಯಿ ಹಾಗೂ ಅಣ್ಣನ ಜೊತೆ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಯುವತಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿಕೊಂಡು ಯುವತಿ ಬಳಿ ಮಾತನಾಡಲೆಂದು ಬಂದ ಕಿರಣ್, ಯುವತಿಯೊಂದಿಗೆ ಜಗಳವಾಡಿದ್ದಾನೆ. ಇಬ್ಬರ ನಡುವೆ ಗಲಾಟೆಯಾಗಿದ್ದು, ಕಿರಣ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಅಲ್ಲದೇ ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಯುವತಿ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular