HomeLatest NewsBIG NEWS: ನರೇಂದ್ರ ಮೋದಿ ಟೆರರಿಸ್ಟ್: ವಿವಾದಾತ್ಮಕ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

BIG NEWS: ನರೇಂದ್ರ ಮೋದಿ ಟೆರರಿಸ್ಟ್: ವಿವಾದಾತ್ಮಕ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಎಐಸಿಸು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಟೆರರಿಸ್ಟ್ ಎಂದು ಹೇಳುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಬಗ್ಗೆ ಟೀಕಿಸುವ ಬರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್. ಮೋದಿಯವರು ತಮ್ಮ ವಿರೋಧಿಗಳನ್ನ ಬೆದರಿಸುತ್ತಾರೆ, ಭಯೋತ್ಪಾದಿಸುತ್ತಾರೆ. ಮೋದಿ ಅವರಿಗೆ ಸಮಾನತೆಯಲ್ಲಿ ನಂಬಿಕೆಯಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಹೇಳಿಕೆ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಖರ್ಗೆ, ಕೇಂದ್ರ ಸಂಸ್ಥೆಗಳು ಬಿಜೆಪಿಯೊಂದಿಗೆ ಕೈಜೋಡಿಸುತ್ತಿರುವುದರಿಂದ ಪ್ರಧಾನಿ ಮೋದಿ ವಿರೋಧಿಗಳನ್ನ ʻಭಯೋತ್ಪಾದಿಸುತ್ತಾರೆʼ. ವಿರೋಧಿಗಳಿಗೆ ಬೆದರಿಕೆ ಹಾಕುತ್ತಾರೆ. ಆದಾಯ ತೆರಿಗೆ, ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಅವರ ಕೈಯಲ್ಲಿವೆ. ಅದಕ್ಕಾಗಿ ಅವರು ಭಯ ಹುಟ್ಟಿಸುತ್ತಾರೆ. ಈ ಅರ್ಥದಲ್ಲಿ ನಾನು ಹೇಳಿದ್ದು. ಆದರೆ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular