HomeJobsಕಾರಾಗೃಹ ಇಲಾಖೆಗೆ ಮಾಜಿ ಸೈನಿಕರ ನೇಮಕಾತಿ: ಇಲ್ಲಿದೆ ಮಾಹಿತಿ

ಕಾರಾಗೃಹ ಇಲಾಖೆಗೆ ಮಾಜಿ ಸೈನಿಕರ ನೇಮಕಾತಿ: ಇಲ್ಲಿದೆ ಮಾಹಿತಿ

ಕೊಪ್ಪಳ: 550 ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲಾಗುತ್ತಿದ್ದು, ಬಾಗಲಕೋಟ ಮತ್ತು ಕೊಪ್ಪಳ ಜಿಲ್ಲೆಯ ಮಾಜಿ ಸೈನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

 ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿಯಿರುವ ವೀಕ್ಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ 550 ಮಾಜಿ ಸೈನಿಕರನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿಸಿ ಸರ್ಕಾರವು ಆದೇಶಿಸಿದೆ. ಮಾಜಿ ಸೈನಿಕರ ವಯೋಮಿತಿ 45 ವರ್ಷಗಳಿಗಿಂತಲೂ ಕಡಿಮೆ ಇರಬೇಕು ಮತ್ತು ಶೇಪ್ ಒನ್ ಆಗಿ ನಿವೃತ್ತಿ ಹೊಂದಿರಬೇಕು ಹಾಗೂ ಇನ್ನು ಕೆಲವು ಷರತ್ತುಗಳೊಂದಿಗೆ 11 ತಿಂಗಳೊಳಗೆ ಗುತ್ತಿಗೆ ಆಧಾರದ ಮೇಲೆ ನಿಯೋಜಿಸುವಂತೆ ಕೋರಿರುತ್ತಾರೆ.

 ಆದ ಕಾರಣ ಇಚ್ಛೆವುಳ್ಳ ಬಾಗಲಕೋಟ ಹಾಗೂ ಕೊಪ್ಪಳ ಜಿಲ್ಲೆಯ ಮಾಜಿ ಸೈನಿಕರು ತಮ್ಮ ಸೇವಾ ದಾಖಲೆಗಳೊಂದಿಗೆ ಏಪ್ರಿಲ್ 24 ಸಮಯ ಮಧ್ಯಾಹ್ನ 2 ರೊಳಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular