HomeAgricultureದ್ವಿದಳ ಧಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಘಟಕ ಸ್ಥಾಪಿಸಲು 25 ಲಕ್ಷ ರೂ.ವರೆಗೆ ಸಹಾಯಧನ: ಆಸಕ್ತ ರೈತರು,...

ದ್ವಿದಳ ಧಾನ್ಯ ಸಂಸ್ಕರಣೆ, ಪ್ಯಾಕೇಜಿಂಗ್ ಘಟಕ ಸ್ಥಾಪಿಸಲು 25 ಲಕ್ಷ ರೂ.ವರೆಗೆ ಸಹಾಯಧನ: ಆಸಕ್ತ ರೈತರು, ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಧಾರವಾಡ: 2026-27 ನೇ ಸಾಲಿಗೆ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಕಾರ್ಯಕ್ರಮದಡಿ ಬೇಳೆ ಕಾಳುಗಳ ಉತ್ಪಾದನೆಯಲ್ಲಿ ದೇಶವನ್ನು ಸ್ವಾಲಂಬಿಯನ್ನಾಗಿಸುವ ಉದ್ದೇಶದಿಂದ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಜಾರಿಗೆ ತಂದಿದೆ. ಈ ಯೋಜನೆಯಡಿ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಘಟಕಗಳನ್ನು ಸ್ಥಾಪಿಸಲು ಆಸಕ್ತ ರೈತರು ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮೇ 20, 2026 ರೊಳಗೆ ಅರ್ಜಿ ಸಲ್ಲಿಸಬೇಕು. ದ್ವಿದಳ ಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ಗುರಿ ಹೊಂದಲಾಗಿದ್ದು, ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ 60:40 ಅನುಪಾತದ ಸಹಾಯಧನದಡಿ ಯೋಜನಾ ವೆಚ್ಚದ ಶೇ.33 ರಷ್ಟು ಸಹಾಯಧನ(ರೂ.25.00 ಲಕ್ಷಗಳ ಗರಿಷ್ಟ ಮಿತಿಯೊಂದಿಗೆ) ನೀಡಲಾಗುವುದು. ಕಟ್ಟಡ ಮತ್ತು ಗೋದಾಮು ನಿರ್ಮಾಣಕ್ಕೆ ಸಹಾಯಧನದ ಮೊತ್ತದಲ್ಲಿ ಗರಿಷ್ಠ ಶೇ.30 ರಷ್ಟು ಹಣವನ್ನು ಬಳಸಿಕೊಳ್ಳಲು ಅವಕಾಶವಿದೆ. ರೈತ ಉತ್ಪಾದಕ ಸಂಸ್ಥೆಗಳು, ಕ್ಲಸ್ಟರ್ ಮಟ್ಟದ ಒಕ್ಕೂಟಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ವೈಯುಕ್ತಿಕ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ತಾಲ್ಲೂಕ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular