HomeKarnatakaವಸತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: 13 ಸಾವಿರ ಮನೆ ಹಂಚಿಕೆ ರದ್ದು ಸಾಧ್ಯತೆ

ವಸತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: 13 ಸಾವಿರ ಮನೆ ಹಂಚಿಕೆ ರದ್ದು ಸಾಧ್ಯತೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಹಂಚಿಕೆಯಾದ ಮನೆಗಳಿಗೆ ಫಲಾನುಭವಿಗಳು ಪೂರ್ಣ ಪ್ರಮಾಣದಲ್ಲಿ ಹಣ ಪಾವತಿಸದ ಕಾರಣ ರದ್ದಾಗುವ ಸಾಧ್ಯತೆ ಇದೆ.

ರಾಜೀವ್ ಗಾಂಧಿ ವಸತಿ ನಿಗಮ ಕೆಲವು ವರ್ಷಗಳ ಹಿಂದೆ 23 ಸಾವಿರ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಿದ್ದು, ಇದರಲ್ಲಿ 13000 ಫಲಾನುಭವಿಗಳು ಪೂರ್ಣ ಪ್ರಮಾಣದಲ್ಲಿ ಹಣ ಪಾವತಿಸದ ಕಾರಣ ರದ್ದಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಸತಿ ಯೋಜನೆ, ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ 2018 ಮತ್ತು 2023ರಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, 13000 ಫಲಾನುಭವಿಗಳು ಮೊದಲ ಕಂತು 50,000 ರೂ. ಪಾವತಿಸಿ ಉಳಿದ ಹಣ ಪಾವತಿಸದ ಕಾರಣ ಮನೆಗಳ ಹಂಚಿಕೆ ರದ್ದು ಮಾಡಲು ಚಿಂತನೆ ನಡೆದಿದೆ.

ಮೊದಲ ಕಂತು ಪಾವತಿಸಿದ ಫಲಾನುಭವಿಗಳಿಗೆ ಉಳಿದ ಕಂತುಗಳನ್ನು ಪಾವತಿಸಲು ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಕಂತು ಪಾವತಿಸದಿರುವುದರಿಂದ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಮನೆಗಳ ಹಂಚಿಕೆ ರದ್ದು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಹಂಚಿಕೆ ರದ್ದಾದ ಫಲಾನುಭವಿಗಳಿಗೆ ಶೇಕಡ 25ರಷ್ಟು ಮೊತ್ತ ಕಡಿತಗೊಳಿಸಿ ಉಳಿದ ಮೊತ್ತ ಪಾವತಿಸಲಾಗುವುದು. ಈಗಾಗಲೇ ಅರ್ಜಿ ಸಲ್ಲಿಸಿದ ಇತರರಿಗೆ ಮನೆ ಹಂಚಿಕೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪ್ರತಿ ಮನೆಗೆ 3.50 ಲಕ್ಷ ರೂ. ಸಹಾಯಧನ ನೀಡುತ್ತಿದ್ದು, ಉಳಿದ ಮೊತ್ತವನ್ನು ಫಲಾನುಭವಿಗಳು ಭರಿಸಬೇಕಿದೆ. ಸರ್ಕಾರದಿಂದ ಸಾಲ ಪಡೆಯಲು ವ್ಯವಸ್ಥೆ ಮಾಡಿ ಬಡ್ಡಿ ದರದಲ್ಲಿ ಶೇಕಡ 3ರಷ್ಟು ಕಡಿಮೆ ಮಾಡುವುದಾಗಿ ಹೇಳಲಾಗಿತ್ತು. ಆದರೂ ಫಲಾನುಭವಿಗಳಿಂದ ನಿರೀಕ್ಷಿತ ಪ್ರತಿಕ್ರಿಯೆ ಬಾರದ ಕಾರಣ ಮನೆಗಳ ಹಂಚಿಕೆ ರದ್ದು ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular