HomeKarnatakaಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗೆ ಉಚಿತ ತರಬೇತಿ: ಕರಾಮುವಿ ವತಿಯಿಂದ ಅರ್ಜಿ ಆಹ್ವಾನ!

ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗೆ ಉಚಿತ ತರಬೇತಿ: ಕರಾಮುವಿ ವತಿಯಿಂದ ಅರ್ಜಿ ಆಹ್ವಾನ!

ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ, ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (K-SET) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಸಹಾಯಕ ಪ್ರಾಧ್ಯಾಪಕರ (UGC-NET) ಮತ್ತು ಕಿರಿಯ ಸಂಶೋಧನಾ ವಿದ್ಯಾರ್ಥಿ ವೇತನ (JRF) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಆಸಕ್ತರು ಏಪ್ರಿಲ್ 24, 2026ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular