HomeKarnatakaSHOCKING : ಬೆಂಗಳೂರಲ್ಲಿ ಹಾಡಹಗಲೇ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಆಘಾತಕಾರಿ ವೀಡಿಯೋ ವೈರಲ್ |WATCH...

SHOCKING : ಬೆಂಗಳೂರಲ್ಲಿ ಹಾಡಹಗಲೇ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಆಘಾತಕಾರಿ ವೀಡಿಯೋ ವೈರಲ್ |WATCH VIDEO

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೆ ಪ್ರಶ್ನೆಯಾಗಿದ್ದು, ಕೋಗಿಲು ಮುಖ್ಯರಸ್ತೆಯ ಮಾರುತಿ ನಗರದಲ್ಲಿ ಹಾಡಹಗಲೇ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಾಮುಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಅನುಚಿತವಾಗಿ ಸ್ಪರ್ಶಿಸಿ ಪರಾರಿಯಾಗಿದ್ದು, ಈ ಘಟನೆಯಿಂದ ಸ್ಥಳೀಯ ನಿವಾಸಿಗಳು ಆಕ್ರೋಶಗೊಂಡಿದ್ದಾರೆ.ನಗರದ ಮಾರುತಿ ನಗರದ ಕೋಗಿಲು ಮುಖ್ಯರಸ್ತೆಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಯುವಕರು ಅನುಚಿತವಾಗಿ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ಕೋಗಿಲು ಮುಖ್ಯರಸ್ತೆಯಲ್ಲಿ ಯುವತಿಯರು ನಡೆದು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಜನದಟ್ಟಣೆ ಇರುವ ಪ್ರದೇಶದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆಯಿಂದ ರೊಚ್ಚಿಗೆದ್ದಿರುವ ಸ್ಥಳೀಯ ನಿವಾಸಿಗಳು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮಹಿಳೆಯರ ಸುರಕ್ಷತೆಗಾಗಿ ಪೊಲೀಸರು ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

View this post on Instagram

A post shared by Namma Bengaluru (@bengaluruupdates)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular