HomeLatest NewsBREAKING : ಆರೋಪಿಯನ್ನು ಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ; ಬಾಗಲಕೋಟೆಯಲ್ಲಿ PSI ,...

BREAKING : ಆರೋಪಿಯನ್ನು ಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ; ಬಾಗಲಕೋಟೆಯಲ್ಲಿ PSI , ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ |Lokayukta Raid

ಬಾಗಲಕೋಟೆ : ಆರೋಪಿಯೊಬ್ಬರನ್ನು ಪ್ರಕರಣದಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೌದು. ಇಸ್ಪೀಟ್ ಜೂಜಾಟದ ಪ್ರಕರಣವೊಂದರಲ್ಲಿ ಆರೋಪಿಯನ್ನು ಕೇಸಿನಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡುಗಡೆ ಮಾಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಪೇದೆ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್ ಬಿರಾದರ್ ಅವರು ದೂರುದಾರರಿಂದ 1.70 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನೂ ರೆಡ್‌ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ.

ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಕಾನ್ಸ್ಟೇಬಲ್ ಸಂತೋಷ್ ಬಿರಾದರ್ ಹಣಕ್ಕೆ ಬೇಡಿಕೆ ಇಟ್ಟವರು.ಇಸ್ಪೀಟ್ ಆಟದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನನ್ನು ಕೇಸಿನಿಂದ ಕೈಬಿಡಲು ಮತ್ತು ಆತನ ಬೈಕ್ ಬಿಡುಗಡೆ ಮಾಡಲು ಇವರು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುದಾರರಿಂದ 1.70 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕೆರೂರಿನಲ್ಲಿ ದಾಳಿ ಮಾಡಿ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಲೋಕಾಯುಕ್ತ ಎಸ್‌ಪಿ ಮಹಾಲಿಂಗ್ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಮತ್ತು ಡಿವೈಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಮುತ್ತಪ್ಪ ನಾಯ್ಕರ್ ಎಂಬುವವರು ನೀಡಿದ ದೂರು ಮತ್ತು ಫೋನ್ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular