HomeKarnatakaನಾಳೆ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ, ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

ನಾಳೆ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ, ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ಇವರ ಸಹಯೋಗದಲ್ಲಿ ಡಾ.ರಾಜ್ ಕುಮಾರ್ ಅವರ 97 ನೇ ಜನ್ಮ ದಿನಾಚರಣೆ ಹಾಗೂ ಡಾ.ರಾಜ್‍ಕುಮಾರ್ ಅವರ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವು ಏಪ್ರಿಲ್, 24 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ|| ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಬಿ.ವೈ., ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಲೋಕೇಶ್ ಸಾಗರ್, ಕುಶಾಲನಗರ ನಿವೃತ್ತ ಕಲಾ ಶಿಕ್ಷಕರಾದ ಉ.ರಾ.ನಾಗೇಶ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಪಾಲ್ಗೊಳ್ಳಲಿದ್ದಾರೆ.

ಕನ್ನಡ ಸಿರಿ ಸ್ನೇಹ ಬಳಗ 25 ಕ್ಕೂ ಹೆಚ್ಚು ಕಲಾವಿದರಿಂದ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಅವರು ಹಾಡಿರುವ ಹಾಗೂ ನಟನೆಯ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular