HomeKarnatakaBREAKING : ಕರ್ನಾಟಕ 'SSLC' ಪರೀಕ್ಷೆ-1 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್...

BREAKING : ಕರ್ನಾಟಕ ‘SSLC’ ಪರೀಕ್ಷೆ-1 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Result 2026

ಬೆಂಗಳೂರು :   ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು (KSEAB) ಇಂದು SSLC ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕುತೂಹಲದಿಂದ ಕಾಯುತ್ತಿದ್ದ ಫಲಿತಾಂಶ ಈಗ ಲಭ್ಯವಿದ್ದು, ಹೈಕೋರ್ಟ್ ನಿರ್ದೇಶನದಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ರಿಸಲ್ಟ್ ಬಿಡುಗಡೆ ಮಾಡಲಾಗಿದೆ. ಸದ್ಯ ವೆಬ್ ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳ ಮೊಬೈಲ್ ಗೆ SMS ಅಥವಾ ವಾಟ್ಸಾಪ್ ಮೂಲಕ ಸಂದೇಶ ರವಾನಿಸಲಾಗಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ ?

ವಿದ್ಯಾರ್ಥಿಗಳು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ ತಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಕಾಣುವ ‘SSLC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (DOB) ನಮೂದಿಸಿ.
  4. ‘Submit’ ಬಟನ್ ಒತ್ತಿದಾಗ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಡಿಜಿಲಾಕರ್ ಸೌಲಭ್ಯ

ವೆಬ್‌ಸೈಟ್ ಮಾತ್ರವಲ್ಲದೆ, ಈ ಬಾರಿ ವಿದ್ಯಾರ್ಥಿಗಳು ತಮ್ಮ ಡಿಜಿಟಲ್ ಅಂಕಪಟ್ಟಿಯನ್ನು ಡಿಜಿಲಾಕರ್ (DigiLocker) ಅಪ್ಲಿಕೇಶನ್ ಮೂಲಕವೂ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದು ಭವಿಷ್ಯದ ಪ್ರವೇಶಾತಿ ಪ್ರಕ್ರಿಯೆಗಳಿಗೆ ಅಧಿಕೃತ ದಾಖಲೆಯಾಗಿ ಬಳಕೆಯಾಗಲಿದೆ.

ಹೈಕೋರ್ಟ್ ಆದೇಶ ಪಾಲನೆ: ಹಿಂದಿ ವಿಷಯಕ್ಕೆಅಂಕ

ಈ ಬಾರಿಯ ಫಲಿತಾಂಶದಲ್ಲಿ ಒಂದು ಪ್ರಮುಖ ಬದಲಾವಣೆಯಿದೆ. ಸರ್ಕಾರವು ತೃತೀಯ ಭಾಷೆ (ಹಿಂದಿ ಸೇರಿದಂತೆ) ವಿಷಯಗಳಿಗೆ ‘ಗ್ರೇಡ್’ ನೀಡಲು ನಿರ್ಧರಿಸಿತ್ತು. ಆದರೆ, ಹೈಕೋರ್ಟ್ ಈ ನಿರ್ಧಾರಕ್ಕೆ ತಡೆ ನೀಡಿ, ಹಳೆಯ ನಿಯಮದಂತೆ ‘ಅಂಕ’ (Marks) ನೀಡುವಂತೆ ಸೂಚಿಸಿದೆ. ಕೋರ್ಟ್ ಆದೇಶದಂತೆ ಈ ವರ್ಷ ತೃತೀಯ ಭಾಷೆಗಳಿಗೆ ಅಂಕಗಳನ್ನೇ ನೀಡಲಾಗುವುದು.ಪಂದ್ಯದ ಮಧ್ಯೆ ನಿಯಮ ಬದಲಾಯಿಸಲು ಸಾಧ್ಯವಿಲ್ಲ” ಎಂದು ಕೋರ್ಟ್ ತಿಳಿಸಿರುವುದರಿಂದ, ಗ್ರೇಡಿಂಗ್ ಪದ್ಧತಿಯನ್ನು ಈ ವರ್ಷ ಜಾರಿಗೆ ತರುತ್ತಿಲ್ಲ.

ಶುಭಾಶಯಗಳು : ಯಶಸ್ವಿಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ನಿರೀಕ್ಷಿತ ಫಲಿತಾಂಶ ಬಾರದಿದ್ದಲ್ಲಿ ಎದೆಗುಂದದೆ, ಮರುಮೌಲ್ಯಮಾಪನ ಅಥವಾ ಪೂರಕ ಪರೀಕ್ಷೆಯ ಅವಕಾಶಗಳನ್ನು ಬಳಸಿಕೊಳ್ಳಿ. ನಿಮ್ಮ ಮುಂದಿನ ಉನ್ನತ ಶಿಕ್ಷಣದ ಪಯಣ ಸುಖಕರವಾಗಿರಲಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular