ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಗೃಹ ಸಚಿವ ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಗೃಹ ಸಚಿವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ , ಗೃಹ ಸಚಿವ ಪರಮೇಶ್ವರ್ ವಿರುದ್ಧ ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ತಿಳಿಸಿದೆ. ಅಲ್ಲದೇ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಕಬಡ್ಡಿ ಟೂರ್ನಿಯೊಂದರಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿ ಸೋತ್ತಿದ್ದರು. ಬಳಿಕ ತಮಾಷೆಗೆ ಬೆಟ್ಟಿಂಗ್ ಕಟ್ಟಿರುವುದನ್ನು ಸಹ ಪರಮೇಶ್ವರ್ ಹೇಳಿಕೊಂಡಿದ್ದರು. ಇದನ್ನು ಹೆಚ್.ಆರ್.ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಪರಮೇಶ್ವರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದು, ಪರಮೇಶ್ವರ್ ಪರವಾಗಿ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್ ಪೀಠ, ತಡೆಯಾಜ್ಞೆ ನೀಡಿ ವಿಚಾಅರಣೆ ಮುಂದೂಡಿದೆ.

