ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕಾನಂದ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಬೆಂಗಳೂರಿನ ಸಂಪಿಗೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಈ ಅಪಾರ್ಟ್ಮೆಂಟ್ ನಲ್ಲಿ ಫ್ಲ್ಯಾಟ್ ಖರೀದಿಸಬೇಕಾಗಿದೆ. ಒಮ್ಮೆ ನೋಡಬೇಕು ಎಂದು ವಿವೇಕಾನಂದ ಮೇಲೆ ಹೋಗಿದ್ದರು. 13ನೇ ಮಹಡಿಗೆ ತೆರಳಿದ ವಿವೇಕಾನಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ವಿವೇಕಾನಂದ ಐದರಿಂದ ಆರು ಕೋಟಿ ರೂಪಾಯಿ ಸಾಲ ಮಾಡಿದ್ದರೆಂದು ಹೇಳಲಾಗಿದೆ. ಸಾಲಗಾರರು ಹಣ ನೀಡುವಂತೆ ವಿವೇಕಾನಂದನ ಹಿಂದೆ ಬಿದ್ದಿದ್ದರು. ಸಾಲಗಾರರ ಕಿರುಕುಳದಿಂದ ಬೇಸತ್ತು ವಿವೇಕಾನಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸಂಪಿಗೆಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

