HomeKarnatakaವಿಶೇಷ ಚೇತನರಿಗೆ ಸಿಹಿ ಸುದ್ದಿ: ಬಡಾವಣೆಗಳಲ್ಲಿ ಶೇ 5ರಷ್ಟು ನಿವೇಶನ ಮೀಸಲು: ಸರ್ಕಾರ ಆದೇಶ

ವಿಶೇಷ ಚೇತನರಿಗೆ ಸಿಹಿ ಸುದ್ದಿ: ಬಡಾವಣೆಗಳಲ್ಲಿ ಶೇ 5ರಷ್ಟು ನಿವೇಶನ ಮೀಸಲು: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಅಭಿವೃದ್ಧಿಪಡಿಸುವ ಬಡಾವಣೆಗಳಲ್ಲಿ ವಿಶೇಷ ಚೇತನರಿಗೆ ಶೇಕಡ 5ರಷ್ಟು ನಿವೇಶನ ಮೀಸಲಿಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಶೇಷ ಚೇತನರ ಹಕ್ಕುಗಳ ಕಾಯ್ದೆ 2016 ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಸಂಬಂಧ ನ್ಯಾಯಾಲಯಕ್ಕೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ಪಿ. ಚಂದ್ರಶೇಖರ್ ಹೈಕೋರ್ಟ್ ಮೊರೆ ಹೋಗಿದ್ದರು.

ನ್ಯಾಯಾಲಯ 2025ರ ನವೆಂಬರ್ 20ರಂದು ವಿಶೇಷ ಚೇತನರ ಹಕ್ಕುಗಳ ರಕ್ಷಣಾ ಕಾಯ್ದೆ ಸೆಕ್ಷನ್ 37ರಂತೆ ವಿಶೇಷ ಚೇತನರಿಗೆ ಸರ್ಕಾರಿ ವಸತಿ ಯೋಜನೆಗಳ ನಿವೇಶನ ಹಂಚಿಕೆಯಲ್ಲಿ ಮತ್ತು ನಿವೇಶನ ಮೌಲ್ಯದಲ್ಲಿ ಶೇಕಡ 25ರಷ್ಟು ರಿಯಾಯಿತಿ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯದ ಆದೇಶದಂತೆ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ವಿಶೇಷ ಚೇತನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅರ್ಜಿದಾರರು ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular