HomeKarnatakaBIG NEWS : ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಸುವರ್ಣಾವಕಾಶ ; ಜು.11 ರಂದು 'ರಾಷ್ಟ್ರೀಯ ಲೋಕ...

BIG NEWS : ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಸುವರ್ಣಾವಕಾಶ ; ಜು.11 ರಂದು ‘ರಾಷ್ಟ್ರೀಯ ಲೋಕ ಅದಾಲತ್’

ಮಡಿಕೇರಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಜುಲೈ, 11 ರಂದು ರಾಷ್ಟ್ರೀಯ ಲೋಕ್ ಆದಾಲತ್ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಲೋಕ್ ಅದಾಲತ್ ನಲ್ಲಿ ಈ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು,

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು. ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ, ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು, ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ವಿಶೇಷ ಸೂಚನೆ: ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಪೆರೆನ್ಸ್ ಮೂಲಕ ಗೌರವಾನ್ವಿತ ಉಚ್ಚ ನ್ಯಾಯಾಲಯ ಸಿ.ಒ.ಪಿ ನಿಯಮಗಳಂತೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಸಹಾಯವಾಣಿ ಸಂಖ್ಯೆ 1800-425-90900, ಕೊಡಗು ಜಿಲ್ಲೆ (ಮಡಿಕೇರಿ) ದೂ.ಸಂ.08272-222373 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular