ಬಳ್ಳಾರಿ : ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮೇ 3ರಂದು ನಡೆಯಲಿರುವ ರಾಷ್ಠ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಆವರಣವನ್ನು ನಿರ್ಬಂಧಿತ ಪ್ರವೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್.ಕೆ ಅವರು ಘೋಷಿಸಿದ್ದಾರೆ.
ಮೇ 3ರಂದು (ಭಾನುವಾರ) ಮಧ್ಯಾಹ್ನ 02 ರಿಂದ ಸಂಜೆ 05 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಅನಧಿಕೃತ ವ್ಯಕ್ತಿಗಳು ಅಥವಾ ಗುಂಪುಗಳು ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಮೇಲಿನ ಯಾವುದೇ ನಿರ್ಬಂಧಗಳು ಪರೀಕ್ಷಾ ಮೇಲ್ವಿಚಾರಣೆ ಮತ್ತು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪರೀಕ್ಷಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಜಿಟಿಟಿಸಿ: ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಕೌಶ್ಯಲ್ಯಾಭಿವೃದ್ಧಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರ(ಜಿಟಿಟಿಸಿ)ದಲ್ಲಿ ಹತ್ತನೇ ತರಗತಿ ಉತ್ತೀರ್ಣರಾದ ಯುವಕರಿಗೆ ‘ಟೂಲ್ ರೂಮ್ ಮಶಿನಿಸ್ಟ್’ ತಾಂತ್ರಿಕ ದೀರ್ಘಾವಧಿ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೆöÊಂಡರ್, ಸಿಎನ್ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲ್ಪಿಸಲಾಗುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಆಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆAಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್)ದ ದೂ.08392-200087 ಅಥವಾ ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾ

