ಇಂದು ( ಏಪ್ರಿಲ್ 24 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆರಿಸಿಕೊಂಡಿದ್ದು, ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಟಾಸ್ ಗೆದ್ದು ತನ್ನ ನಿರ್ಣಯ ತಿಳಿಸಿದ ಬಳಿಕ ಆಡುವ ಬಳಗದ ಕುರಿತು ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಟಿದಾರ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಗಾಯಕ್ಕೊಳಗಾಗಿದ್ದು, ಅವರ ಬದಲಾಗಿ ಜೇಕಬ್ ಬೆಥೆಲ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಮೂಲಕ ಟೂರ್ನಿ ಆರಂಭವಾದಾಗಿನಿಂದಲೂ ಜೇಕಬ್ ಬೆಥೆಲ್ ಆಡಿಸಿ ಎಂದು ಮನವಿ ಮಾಡುತ್ತಿದ್ದ ಆರ್ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಾಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೊ ಶೆಪರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಝಲ್ವುಡ್, ಸುಯಶ್ ಶರ್ಮಾ, ರಸಿಖ್ ಸಲಾಂ ದಾರ್
ಗುಜರಾತ್ ಟೈಟನ್ಸ್ ಆಡುವ ಬಳಗ: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೇವಾಟಿಯಾ, ಜೇಸನ್ ಹೋಲ್ಡರ್, ರಶೀದ್ ಖಾನ್, ಮನವ್ ಸುಥಾರ್, ಕಗಿಸೋ ರಬಾಡಾ, ಮೊಹಮ್ಮದ್ ಸಿರಾಜ್

