ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫುಡ್ ಡೆಲಿವರಿ ಬಾಯ್ ಹರೀಶ್, ಪ್ರಜ್ವಲ್ ಬಂಧಿತರು. ಬೆಂಗಳೂರಿನ ಕೋಗಿಲು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿತ್ತು. ಬೈಕ್ ನಲ್ಲಿ ತೆರಳುವಾಗ ಯುವತಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದರು.
ಕೋಗಿಲು ರಸ್ತೆಯಲ್ಲಿ ನಡೆದ ಪುಂಡಾಟಿಕೆ ಘಟನೆ ದೃಶ್ಯಗಳು ಕಾರ್ ನ ಡ್ಯಾಶ್ ಕ್ಯಾಮೆರಾಲ್ಲಿ ಸೆರೆಯಾಗಿತ್ತು. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

