ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಜೈಲು ಪಾಲಾಗಿದ್ದಾರೆ. ಆದರೆ ಈಗ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ವಿನಯ್ ಕುಲಕರ್ಣಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತನಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಜೀವಾವಧಿ ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

