ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸಾ ವಿರುದ್ಧ ರಾಜ್ ಕುಮಾರ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ.
ಡಾ.ರಾಜ್ ಕುಮಾರ್ ಸಮಾಧಿಗೆ ಸರ್ಕಾರ 2.5 ಎಕರೆ ಜಾಗ ನೀಡಿದ್ದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದರು. 2.5 ಎಕರೆ ಜಾಗ ನೀಡಿದ್ದು ತಿಳುವಳಿಕೆಯ ನಿರ್ಧಾರವಾಗಿತ್ತಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಸಾರ್ವಜನಿಕರ ಉಪಯೋಗಕ್ಕೆ ಭೂಮಿ ಹಂಚಬೇಕು ಮತಗಳ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಹಾಕಿದ್ದರು.
ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇನತ್ ವಿರುದ್ಧ ಡಾ.ರಾಜ್ ಕುಮಾರ್ ಅಭಿಮಾನಿಗಳು ಕಿಡಿಕಾರಿದ್ದಾರೆ. ಅಲ್ಲದೇ ಡಾ.ರಾಜ್ ಕುಮಾರ್ ಸೇನೆಯಿಂದ ಬಸವೇಶ್ವರನಗರ ಪೊಲಿಸ್ ಠಾಣೆಯಲ್ಲಿ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

