HomeKarnatakaರಾಜ್ಯದ ಗ್ರಾಮೀಣ ಭಾಗದ ಬಾಯಾರಿಕೆ ನೀಗಿಸಲು ಸರ್ಕಾರದಿಂದ ಮಾಸ್ಟರ್ ಪ್ಲಾನ್ : 31 ಜಿಲ್ಲೆಗಳಿಗೆ ₹45...

ರಾಜ್ಯದ ಗ್ರಾಮೀಣ ಭಾಗದ ಬಾಯಾರಿಕೆ ನೀಗಿಸಲು ಸರ್ಕಾರದಿಂದ ಮಾಸ್ಟರ್ ಪ್ಲಾನ್ : 31 ಜಿಲ್ಲೆಗಳಿಗೆ ₹45 ಕೋಟಿ ಬಿಡುಗಡೆ !

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲಿನಿಂದಾಗಿ ಉಂಟಾಗುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಕರ್ನಾಟಕ ಸರ್ಕಾರ ಭಾರಿ ಮೊತ್ತದ ಅನುದಾನ ಬಿಡುಗಡೆ ಮಾಡಿದೆ. 2026-27ನೇ ಸಾಲಿನ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತಾ ಇಲಾಖೆಯ ವತಿಯಿಂದ ಒಟ್ಟು ₹45.00 ಕೋಟಿ ಅನುದಾನವನ್ನು ವಿವಿಧ ಜಿಲ್ಲೆಗಳಿಗೆ ಅಗತ್ಯಕ್ಕನುಗುಣವಾಗಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ತುರ್ತು ಕ್ರಮಗಳಿಗೆ ಆದ್ಯತೆ: ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಮತ್ತು ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲು ಈ ಅನುದಾನ ಬಳಸಲಾಗುವುದು.

ಹೊಸ ಕೊಳವೆ ಬಾವಿಗಳಿಗೆ ನಿಯಮ: ಸ್ಥಗಿತಗೊಂಡಿರುವ ಕೊಳವೆಬಾವಿಗಳನ್ನು ಫ್ಲಶಿಂಗ್ ಮೂಲಕ ಪುನಶ್ಚೇತನಗೊಳಿಸಲು ಸೂಚಿಸಲಾಗಿದ್ದು, ಅನಿವಾರ್ಯವಿದ್ದಲ್ಲಿ ಮಾತ್ರ ಭೂವಿಜ್ಞಾನಿಗಳ ಸಲಹೆ ಮೇರೆಗೆ ಹೊಸ ಕೊಳವೆಬಾವಿ ಕೊರೆಯಲು ಅನುಮತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾವಾರು ಹಂಚಿಕೆ: ಬೆಳಗಾವಿ, ಕಲಬುರಗಿ, ಕೋಲಾರ, ರಾಯಚೂರು, ರಾಮನಗರ ಮತ್ತು ಉಡುಪಿ ಜಿಲ್ಲೆಗಳಿಗೆ ಗರಿಷ್ಠ ತಲಾ ₹2.00 ಕೋಟಿ ಅನುದಾನ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ₹1.00 ರಿಂದ ₹1.50 ಕೋಟಿ ಹಂಚಿಕೆ ಮಾಡಲಾಗಿದೆ.

ಅಧಿಕಾರಿಗಳಿಗೆ ಜವಾಬ್ದಾರಿ: ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಟಾಸ್ಕ್ ಫೋರ್ಸ್ ಸಮಿತಿಯ ಅನುಮೋದನೆ ಪಡೆಯಲು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗುವ ಕುಡಿಯುವ ನೀರಿನ ತುರ್ತು ಸಮಸ್ಯೆಗಳನ್ನು ನಿವಾರಿಸಲು ಟ್ಯಾಂಕರ್ ಮೂಲಕ ಹಾಗೂ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲು ಆದ್ಯತೆ ನೀಡಬೇಕು. ಸ್ಥಗಿತಗೊಂಡಿರುವ ಕೊಳವೆಬಾವಿಗಳನ್ನು ಫ್ಲಶಿಂಗ್ ಮೂಲಕ ಆಳಗೊಳಿಸಲು ಪ್ರಯತ್ನಿಸಬೇಕು, ಅನಿವಾರ್ಯವಾದಲ್ಲಿ ಮಾತ್ರ ಭೂವಿಜ್ಞಾನಿಗಳ ಸಲಹೆ ಮೇರೆಗೆ ಹೊಸ ಕೊಳವೆಬಾವಿ ಕೊರೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ . ಹಾಗೂ ಇಂತಹ ಕ್ರಮಗಳಿಗೆ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಅನುಮೋದನೆಯನ್ನು ಪಡೆಯಲು ಸಿಇಓ ಗಳಿಗೆ ತಿಳಿಸಲಾಗಿದೆ.ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕಾರ್ಯಗಳ ಪ್ರಗತಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿಸಿದ ಇಂಜಿನಿಯರ್‌ಗಳು ನಿಯಮಿತವಾಗಿ ಪರಿಶೀಲಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ನಿರ್ದೇಶಿಸಲಾಗಿದೆ. ಈ ಕ್ರಮದಿಂದ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಹೆಚ್ಚಾಗಿ, ಸಾರ್ವಜನಿಕ ಆರೋಗ್ಯ ಮತ್ತು ಜೀವನಮಟ್ಟದಲ್ಲಿ ಮಹತ್ವದ ಸುಧಾರಣೆ ಕಾಣಿಸಿಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular