HomeLatest News10 ನೇ ತರಗತಿ ಪಾಸಾದ ಯುವಕರಿಗೆ ಸುವರ್ಣಾವಕಾಶ ; ಜಿಟಿಟಿಸಿ ಕೇಂದ್ರದಲ್ಲಿ ತಾಂತ್ರಿಕ ತರಬೇತಿಗೆ ಅರ್ಜಿ...

10 ನೇ ತರಗತಿ ಪಾಸಾದ ಯುವಕರಿಗೆ ಸುವರ್ಣಾವಕಾಶ ; ಜಿಟಿಟಿಸಿ ಕೇಂದ್ರದಲ್ಲಿ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ !

ಬಳ್ಳಾರಿ : ಕೌಶ್ಯಲ್ಯಾಭಿವೃದ್ಧಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರ(ಜಿಟಿಟಿಸಿ)ದಲ್ಲಿ ಹತ್ತನೇ ತರಗತಿ ಉತ್ತೀರ್ಣರಾದ ಯುವಕರಿಗೆ ‘ಟೂಲ್ ರೂಮ್ ಮಶಿನಿಸ್ಟ್’ ತಾಂತ್ರಿಕ ದೀರ್ಘಾವಧಿ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೈಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲ್ಪಿಸಲಾಗುತ್ತದೆ.

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಆಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್)ದ ದೂ.08392-200087 ಅಥವಾ ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular