ಬೆಂಗಳೂರು: ರಾಜ್ಯದ ಕ್ರೈಸ್ ವಸತಿ ಶಾಲೆಗಳಲ್ಲಿ ಖಾಲಿ ಇರುವ 1500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಕ್ರೈಸ್ ವಸತಿ ಶಾಲೆಗಳಲ್ಲಿ ಕಾಲಿ ಇರುವ 1,500 ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದ್ದಾರೆ.
ಒಳ ಮೀಸಲಾತಿ ಜಾರಿ ಸಂಬಂಧ ಅಧಿಸೂಚನೆ ಹೊರಡಿಸಿದ ನಂತರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು. ಕ್ರೈಸ್ ವಸತಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡಲು ಗಮನಹರಿಸಲಾಗಿದೆ. ಹೆಚ್ಚು ಶ್ರಮದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಭಿನಂದಿಸುವುದಾಗಿ ಸಚಿವರು ತಿಳಿಸಿದ್ದಾರೆ.

