HomeLatest Newsಚಾರ್ಮಿನಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ

ಚಾರ್ಮಿನಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭೀಕರ ಬೆಂಕಿ ಅವಘಡ

ಹೈದರಾಬಾದ್: ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕೆಲ ಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ತೆಲಂಗಾಣದ ಅಲೆರ್ ರೈಲು ನಿಲ್ದಾಣದ ಬಳಿ ನಡೆದಿದೆ.

ಚಾಅರ್ಮಿನಾರ್ ಎಕ್ಸ್ ಪ್ರೆಸ್ ರೈಲು, ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆ ಒಂದು ಬೋಗಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಭಯ ಭೀತರಾದ ಪ್ರಯಾಣಿಕರು ತಕ್ಷಣ ರೈಲಿನಿಂದ ಕೆಳಗಿಳಿದಿದ್ದಾರೆ.

ರೈಲಿನ S5 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಎಚ್ಚೆತ್ತ ರೈಲ್ವೆ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಗಳಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೈಲಿನಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತನಿಖೆ ಮುಂದುವರೆದಿದೆ .

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular