HomeIndiaಸ್ವಿಸ್ ವಿಮಾನದಲ್ಲಿ ಬೆಂಕಿ: 6 ಪ್ರಯಾಣಿಕರಿಗೆ ಗಂಭೀರ ಗಾಯ

ಸ್ವಿಸ್ ವಿಮಾನದಲ್ಲಿ ಬೆಂಕಿ: 6 ಪ್ರಯಾಣಿಕರಿಗೆ ಗಂಭೀರ ಗಾಯ

ನವದೆಹಲಿ: ವಿಮಾನ ಟೇಕಾಫ್ ಆಗುತ್ತಿದ್ದ ವೇಳೆ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 6 ಜನರು ಗಾಯಗೊಂಡಿರುವ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದೆಹಲಿಯಿಂದ ಜ್ಯೂರಿಚ್‌ಗೆ ತೆರಳಬೇಕಿದ್ದ ಸ್ವಿಸ್ ವಿಮಾನಯಾನ ಸಂಸ್ಥೆಯ ಏರ್‌ಬಸ್ ವಿಮಾನ (A330) ಇಂದು ಬೆಳಿಗ್ಗೆ ಟೇಕಾಫ್ ಆಗಲು ರನ್‌ವೇ ಮೇಲೆ ಚಲಿಸುತ್ತಿದ್ದ ವೇಳೆ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಪೈಲಟ್ ವಿಮಾನವನ್ನು ನಿಲ್ಲಿಸಿ ತುರ್ತು ದ್ವಾರ ತೆರೆದು ಸ್ಲೈಡ್‌ಗಳ ಮೂಲಕ ಪ್ರಯಾಣಿಕರನ್ನು ರನ್‌ವೇಯಲ್ಲಿ ಇಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನದಿಂದ ಇಳಿಯುವಾಗ 6 ಪ್ರಯಾಣಿಕರಿಗೆ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿದ್ದ 228 ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular