ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಯೂಟರ್ನ್ ತೆಗೆದುಕೊಳ್ಳುವ ವೇಳೆ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದವರು ನಾಗೇಶ್. ಎನ್ (26), ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹರಳುಕುಪ್ಪೆ ಗ್ರಾಮದ ಮನೋಜ್ (24) ಮೃತ ದುರ್ದೈವಿಗಳು.
ಮೃತ ನಾಗೇಶ್ ಮತ್ತು ಮನೋಜ್ ಖಾಸಗಿ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಒಂದೇ ರೂಮ್ನಲ್ಲಿ ವಾಸವಾಗಿದ್ದರು. ಇಬ್ಬರೂ ಬೈಕ್ನಲ್ಲಿ ಊಟಕ್ಕೆ ಹೋಗುತ್ತಿದ್ದಾಗ ಲೋಡ್ ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

